Publish Date: Wed, 28 Feb 2018 (10:15 IST)
Updated Date: Wed, 28 Feb 2018 (10:19 IST)
ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾರ್ತಿ ಚಿದಂಬರಂ ಅವರನ್ನು ಬಂಧಿಸಲಾಗಿದೆ. ಅಂದು ವಿತ್ತ ಸಚಿವರಾಗಿದ್ದ ಚಿದಂಬರಂ ಪ್ರಭಾವ ಬಳಸಿ ಐಎನ್ ಎಕ್ಸ್ ಮೀಡಿಯಾ ತೆರಿಗೆ ವಿನಾಯ್ತಿ ಪಡೆಯಲು ಕಾರ್ತಿ ಚಿದಂಬರಂಗೆ ಲಂಚ ನೀಡಲಾಗಿತ್ತು ಎಂಬುದು ಅವರ ಮೇಲಿರುವ ಆರೋಪವಾಗಿದೆ.
ಇದಲ್ಲದೆ ವಿದೇಶೀ ವಿನಿಮಯ ಕಾಯ್ದೆ ಉಲ್ಲಂಘನೆ ಪ್ರಕರಣವೂ ಅವರ ಮೇಲಿದೆ. ಈ ಹಿನ್ನಲೆಯಲ್ಲಿ ಕಾರ್ತಿ ಚಿದಂಬರಂ ಅವರನ್ನು ಬಂಧಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ