Publish Date: Wed, 18 Jul 2018 (14:50 IST)
Updated Date: Wed, 18 Jul 2018 (14:56 IST)
ಚೆನ್ನೈ : ಡಿಎಂಕೆ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಎಂ ಕರಣಾನಿಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಬುಧವಾರ (ಇಂದು) ಚೆನ್ನೈ ನ ಕಾವೇರಿ ಆಸ್ಪತ್ರೆಗೆ ದಾಖಲಾಗಿರುವ ಕರುಣಾನಿಧಿ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಇದೀಗ ಅವರಿಗೆ ಅಳವಡಿಸಿದ್ದ ಶ್ವಾಸನಾಳ ಬದಲಾವಣೆಗಾಗಿ ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದು ಕಾವೇರಿ ಆಸ್ಪತ್ರೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಶ್ವಾಶನಾಳ ಅಳವಡಿಕೆ ಕೆಲಸ ಮುಗಿದ ನಂತರ ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. 95 ವರ್ಷದ ಕರುಣಾನಿಧಿ ಕಳೆದ ವರ್ಷ ಆಗಸ್ಟ್ ನಲ್ಲಿ ಎಂಡೋಸ್ಕೋಪಿಗೆ ಕೂಡ ಒಳಗಾಗಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ