ನವದೆಹಲಿ : ಬಾಲಿವುಡ್ ಚಲನಚಿತ್ರ ದಿ ಕಾಶ್ಮೀರ್ ಫೈಲ್ಸ್ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಾಣುತ್ತಿರುವ ಬೆನ್ನಲ್ಲೇ 1990ರಲ್ಲಿ ಕಾಶ್ಮೀರ ಪಂಡಿತರ ಹತ್ಯಾಕಾಂಡದ ಕುರಿತು ಮರು ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಕಾಶ್ಮೀರ ಪಂಡಿತರ ಸಂಘಟನೆ ʼರೂಟ್ ಇನ್ ಕಾಶ್ಮೀರ್ʼ ಸುಪ್ರೀಂ ಕೋರ್ಟ್ಗೆ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಿದೆ. ಈ ಮೂಲಕ 2017ರಲ್ಲಿ ವಜಾಗೊಂಡಿದ್ದ ಪ್ರಕರಣಕ್ಕೆ ಈಗ ಮರುಜೀವ ಬಂದಿದೆ.
ಕೇವಲ ಊಹೆಯ ಆಧಾರದಲ್ಲಿ ಆರಂಭಿಕ ಹಂತದಲ್ಲಿ ರಿಟ್ ಅರ್ಜಿಯನ್ನು ವಜಾಗೊಳಿಸಿರುವುದು ಸರಿಯಲ್ಲ. 2007 ರ ಜಪಾನಿ ಸಾಹೂ ವರ್ಸಸ್ ಚಂದ್ರ ಶೇಖರ್ ಮೊಹಂತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ “ಅಪರಾಧ ಎಂದಿಗೂ ಸಾಯುವುದಿಲ್ಲ” ಎಂದು ಹೇಳಿದೆ.
ಹೀಗಾಗಿ ಮತ್ತೊಮ್ಮೆ ಅರ್ಜಿಯನ್ನು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದೆ.