Publish Date: Tue, 17 Oct 2023 (16:20 IST)
Updated Date: Tue, 17 Oct 2023 (16:22 IST)
ರಾಷ್ಟ್ರರಾಜಧಾನಿಯಲ್ಲಿ ಕನ್ನಡಿಗರ ಕೂಗು ಪ್ರತಿಧ್ವನಿಸಲಿದೆ. ನದಿ ನೀರು ಹಂಚಿಕೆ ಸಂಬಂಧ ಶಾಶ್ವತ ಪರಿಹಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರ ನೇತೃತ್ವದಲ್ಲಿ ದೆಹಲಿಯ ಜಂತರ್‌ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಬಳಿಕ ಪ್ರಧಾನಿ ಭೇಟಿಯಾಗಿ ಮನವಿ ಸಲ್ಲಿಸಲಿದ್ದಾರೆ. ಹೀಗಾಗಿ ಇಂದು ಕರವೇ ಕಾರ್ಯಕರ್ತರು ಕೆಲವರು ವಿಮಾನದ ಮೂಲಕ ನವದೆಹಲಿಗೆ ಪ್ರಯಾಣಿಸಲಿದ್ದು, ಈಗಾಗಲೇ ಹಲವರು ವಿಮಾನಗಳ ಮೂಲಕ ದೆಹಲಿಯತ್ತ ಪ್ರಯಾಣ ಬೆಳಸಿದ್ದಾರೆ.