ಪಾಟ್ನಾ : ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗಲು ಬುಧವಾರ ಬಿಹಾರಕ್ಕೆ ಭೇಟಿ ನೀಡಿದ್ದರು.
ಜೊತೆಗೆ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿ “ಬಿಜೆಪಿ-ಮುಕ್ತ ಭಾರತಕ್ಕೆ ಕರೆ ನೀಡಿದರು.
ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರನ್ನು ಭೇಟಿಯಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿರುವ ಅನೇಕ ಸಮಸ್ಯೆಗಳಿಗೆ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಆಡಳಿತ ಕಾರಣವೆಂದು ಆರೋಪಿಸಿದರು.
ಇದೇ ವೇಳೆ ರೂಪಾಯಿ ಮೌಲ್ಯ ಕುಸಿತ, ರೈತರ ಪ್ರತಿಭಟನೆ, ನಿರುದ್ಯೋಗ ಮತ್ತು ಬೆಲೆ ಏರಿಕೆಯ ಕುರಿತಂತೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.