Publish Date: Thu, 13 Dec 2018 (14:55 IST)
Updated Date: Thu, 13 Dec 2018 (14:56 IST)
ಹೈದರಾಬಾದ್ : ಇಂದು ಎರಡನೇ ಬಾರಿ ತೆಲಂಗಾಣ ಮುಖ್ಯಮಂತ್ರಿಯಾಗಿ ಕೆ. ಚಂದ್ರಶೇಖರ್ ರಾವ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕೆ. ಚಂದ್ರಶೇಖರ್ ರಾವ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮಧ್ಯಾಹ್ನ 1.30 ಕ್ಕೆ ರಾಜಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಕೆಸಿಆರ್ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಜ್ಯಪಾಲ ನರಸಿಂಹನ್ ಅವರು ಕೆಸಿಆರ್ ಅವರಿಗೆ ಪ್ರಮಾಣ ವಚನ ಬೋಧನೆ ಮಾಡಿದ್ದಾರೆ. ಇವರ ಜೊತೆಗೆ ಮಹಮ್ಮದ್ ಅಲಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.