Webdunia - Bharat's app for daily news and videos

Install App

ತಾಕತ್ತಿದ್ರೆ ನಮ್ಮಂತೆ ಸರಕಾರ ನೌಕರರ ವೇತನ ಹೆಚ್ಚಿಸಿ: ಬಿಜೆಪಿ, ಕಾಂಗ್ರೆಸ್‌ಗೆ ಕೇಜ್ರಿವಾಲ್ ಸವಾಲ್

Webdunia
ಬುಧವಾರ, 17 ಆಗಸ್ಟ್ 2016 (20:35 IST)
ರಾಜ್ಯ ಸರಕಾರಿ ನೌಕರರ ವೇತನ ಹೆಚ್ಚಳ ಸಮರ್ಥಿಸಿಕೊಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಹಣ ಬಡವರು ಮತ್ತು ಮಧ್ಯಮ ವರ್ಗದವರ ಕೈಯಲ್ಲಿರಬೇಕೇ ಹೊರತು ಅಂಬಾನಿ ಮತ್ತು ಆದಾನಿಯಲ್ಲಿರುವುದರಿಂದ ದೇಶದ ಆರ್ಥಿಕತೆಗೆ ಯಾವುದೇ ಲಾಭವಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಾವೇ ಅಧಿಕಾರರೂಡವಿರುವ ರಾಜ್ಯಗಳಲ್ಲಿ ಇಂತಹ ತೀರ್ಮಾನ ತೆಗೆದುಕೊಳ್ಳುವ ಧೈರ್ಯ ತೋರಲಿವೆಯೇ ಎಂದು ಪ್ರಶ್ನಿಸಿದರು.
 
ಮುಷ್ಕರ ನಡೆಸಿ ದೇಶಾದ್ಯಂತ ವಹಿವಾಟು ಸ್ಥಗಿತಗೊಳಿಸುವುದರಿಂದ ಯಾವುದೇ ಮುಷ್ಕರ ನಿರತ ಸಂಘಟನೆಗಳಿಗೆ ಲಾಭವಾಗುವುದಿಲ್ಲ. ಬಡವರಿಗೆ ಹಣ ತಲುಪಿದಾಗ ದೇಶದ ಆರ್ಥಿಕತೆ ಚೇತರಿಕೆ ಕಾಣಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. 
 
ದೇಶದ ಆರ್ಥಿಕ ನೀತಿಗಳು ಬಡವರಿಗೆ ಲಾಭವಾಗುವಂತಿರಬೇಕು. ದೈನಂದಿನ ವೆಚ್ಚದಲ್ಲಿ ಹೆಚ್ಚಳವಾಗಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ದೀರ್ಘಾವಧಿಯಲ್ಲಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಲಾಭವಾಗಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments