ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಶನಿವಾರ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಜಾಮೀನು ಮಂಜೂರು ಮಾಡಿದೆ.
ಇಂದು ವಿಚಾರಣೆಗೆ ಹಾಜರಾಗಿದ್ದ ಕೇಜ್ರಿವಾಲ್ ಅವರಿಗೆ ಮೆಟ್ರೊಪಾಲಿಟಿನ್ ಮ್ಯಾಜಿಸ್ಟ್ರೇಟ್ ಆಶೀಷ್ ಗುಪ್ತಾ 10,000 ರೂಪಾಯಿ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಿದ್ದಾರೆ. ಮುಂದಿನ ವಿಚಾರಣೆಯನ್ನು ಎಪ್ರಿಲ್ 7, 2017ಕ್ಕೆ ಮುಂದೂಡಲಾಗಿದೆ.
2013ರ ವಿಧಾನಸಭೆ ಚುನಾವಣೆಯಲ್ಲಿ ಕೇಜ್ರಿವಾಲ್, ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಲಾಗಿದೆ ಎಂದು ಸ್ವಯಂ ಸೇವಾ ಸಂಸ್ಥೆಯೊಂದು ಕೋರ್ಟ್ ಮೆಟ್ಟಿಲೇರಿತ್ತು.
ಆಗಸ್ಟ್ 31 ರಂದು ಕೋರ್ಟ್‌ಗೆ ಹಾಜರಾಗಿರುವುದರಿಂದ ಕೇಜ್ರಿಗೆ ವಿನಾಯತಿ ನೀಡಿದ್ದ ಕೋರ್ಟ್ ಡಿಸೆಂಬರ್ 24ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ