Select Your Language

Notifications

webdunia
webdunia
webdunia
webdunia

ಕೇಜ್ರಿವಾಲ್‌ಗೆ ಸಿಗದ ಜಾಮೀನು: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಮೊರೆ ಎಂದ ಎಎಪಿ

ಕೇಜ್ರಿವಾಲ್‌ಗೆ ಸಿಗದ ಜಾಮೀನು: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಮೊರೆ ಎಂದ ಎಎಪಿ

Sampriya

ನವದೆಹಲಿ , ಮಂಗಳವಾರ, 25 ಜೂನ್ 2024 (19:38 IST)
ನವದೆಹಲಿ: ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್‌ ತಡೆ ನೀಡಿರುವುದನ್ನು ಪ್ರಶ್ನಿಸಿ ಎಎಪಿ  ಸುಪ್ರೀಂ ಕೋರ್ಟ್‌ಗೆ ಹೋಗುವುದಾಗಿ ಹೇಳಿದೆ.

ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರನ್ನೊಳಗೊಂಡ ಹೈಕೋರ್ಟ್‌ನ ರಜಾ ಕಾಲದ ಏಕ ಸದಸ್ಯ ಪೀಠ, ಪ್ರಕರಣ ಸಂಬಂಧ ನ್ಯಾಯಾಲಯದ ಮುಂದಿಟ್ಟ ಸಾಕ್ಷ್ಯಗಳು ಮತ್ತು ವಾದದ ಕುರಿತಂತೆ ಜಾರಿ ನಿರ್ದೇಶನಾಲಯವನ್ನು ಪ್ರಶಂಶೆ ವ್ಯಕ್ತಪಡಿಸಿದೆ. ಜಾಮೀನು ನೀಡುವ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯ ಈ ವಿಷಯಗಳನ್ನು ಪರಿಗಣಿಸಿಲ್ಲ ಎಂದು ಒತ್ತಿ ಹೋಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ದೆಹಲಿ ಹೈಕೋರ್ಟ್‌ ನೀಡಿರುವ ಆದೇಶವನ್ನು ನಾವು ಒಪ್ಪುವುದಿಲ್ಲ. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್‌ಗೆ ಜಾಮೀನು