Select Your Language

Notifications

webdunia
webdunia
webdunia
webdunia

ಚುನಾವಣೆ ಮೇಲೆ ಕೇಜ್ರಿವಾಲ್ ಚಿತ್ತ

ಚುನಾವಣೆ ಮೇಲೆ ಕೇಜ್ರಿವಾಲ್ ಚಿತ್ತ
ಬೆಂಗಳೂರು , ಗುರುವಾರ, 21 ಏಪ್ರಿಲ್ 2022 (09:37 IST)
ಬೆಂಗಳೂರು : ಮುಂಬರುವ 2023ರ ವಿಧಾನಸಭಾ ಚುನಾವಣೆ ಹಿನ್ನೆಲೆ ಬುಧವಾರ ಕರ್ನಾಟಕಕ್ಕೆ ಭೇಟಿ ನೀಡಿರುವ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಇಂದು ಭಾಷಣ ಮಾಡಲಿದ್ದಾರೆ.

ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಜ್ರಿವಾಲ್ ಅವರು ಪಕ್ಷದ ರಾಜ್ಯ ಘಟಕದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅರವಿಂದ್ ಕೇಜ್ರಿವಾಲ್ ಅವರು ಇಂದು ಬೆಳಗ್ಗೆ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರೈತರು, ಮಹಿಳೆಯರು ಮತ್ತು ಯುವಕರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. 

ಪಂಜಾಬ್ ಗೆಲುವಿನ ಬಳಿಕ ಆಮ್ ಆದ್ಮಿ ಪಕ್ಷ ಇದೀಗ ದಕ್ಷಿಣದ ರಾಜ್ಯಗಳಲ್ಲಿ ತನ್ನ ಅಸ್ತಿತ್ವವನ್ನು ಗುರುತಿಸಿಕೊಳ್ಳಲು ನೋಡುತ್ತಿದೆ. ಈ ನಿಟ್ಟಿನಲ್ಲಿ ಕೇಜ್ರಿವಾಲ್ ಪಕ್ಷದ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂತೋಷ್ ಪ್ರಕರಣಕ್ಕೆ ಟ್ವಿಸ್ಟ್!?