ಆಲಪ್ಪುಳ: ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ವೈದ್ಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಈ ಭೀಕರ ಅಪಘಾತದ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಆಲಪ್ಪುಳದ ಕಳರ್ ಕೋಡ್ ಎಂಬಲ್ಲಿ ನಿನ್ನೆ ರಾತ್ರಿ 10 ಗಂಟೆಗೆ ದುರಂತ ಸಂಭವಿಸಿತ್ತು. ವೈದ್ಯ ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಢಿಕ್ಕಿ ಹೊಡೆದಿತ್ತು. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿತ್ತು. ಕಾರಿನಲ್ಲಿ ಒಟ್ಟು ಏಳು ಮಂದಿಯಿದ್ದರು. ಎಲ್ಲರೂ ವೈದ್ಯ ವಿದ್ಯಾರ್ಥಿಗಳೇ.
ಈ ಪೈಕಿ ಐವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಢಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಬಳಿಕ ಯುವಕರ ಮೃತೇಹಗಳನ್ನು ಹೊರಗೆಳೆದು ತೆಗೆಯಬೇಕಾಯಿತು.
ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಇನ್ನೊಂದು ಬದಿಯಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಮಳೆಯಿಂದಾಗಿ ರಸ್ತೆ ಒದ್ದೆಯಾಗಿದ್ದು ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿರುವಂತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ.