Publish Date: Fri, 05 Jun 2020 (10:19 IST)
Updated Date: Fri, 05 Jun 2020 (10:21 IST)
ಮಲಪ್ಪುರಂ: ಕೇರಳದಲ್ಲಿ ಗರ್ಭಿಣಿ ಆನೆಗೆ ಸ್ಪೋಟಕ ತಿನಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಬಂಧಿಸಲಾಗಿದೆ.
ಘಟನೆ ಬಗ್ಗೆ ದೇಶದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಕೇಂದ್ರ ಅರಣ್ಯ ಇಲಾಖೆಯೂ ಮಧ್ಯಪ್ರವೇಶ ಮಾಡಿತ್ತು. ಇದಾದ ಬಳಿಕ ಕೇರಳ ಸಿಎಂ ಪಿಣರಾಯಿ ವಿಜಯನ್ ಕೂಡಾ ತಪ್ಪಿತಸ್ಥರನ್ನು ಗುರುತಿಸಿ ತಕ್ಕ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
ಅದರಂತೆ ಈಗ ತನಿಖೆ ಪ್ರಗತಿಯಲ್ಲಿದ್ದು, ಮೂವರು ಶಂಕಿತರನ್ನು ಬಂಧಿಸಲಾಗಿದೆ. ಉಳಿದಂತೆ ವಿಚಾರಣೆ ಮುಂದುವರಿದ್ದು, ಇನ್ನಷ್ಟು ಜನರನ್ನು ಬಂಧಿಸುವ ಸಾಧ‍್ಯತೆಯಿದೆ.