ತಿರುವನಂತಪುರಂ: ಕೇರಳ ಮಾಜಿ ಸಿಎಂ, ಸಿಪಿಎಂ ಹಿರಿಯ ನಾಯಕ ವಿಎಸ್ ಅಚ್ಯುತಾನಂದನ್ ಇನ್ನಿಲ್ಲ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
ಅವರಿಗೆ 101 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದಾಗಿ ಅವರಿಗೆ ಜೀವ ರಕ್ಷಕ ಸಾಧನ ಅಳವಡಿಸಲಾಗಿತ್ತು. ಜೂನ್ 23 ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಕ್ಕೆ ಮೊದಲೂ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.
ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ಸಿಪಿಎಂ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಮಧ್ಯಾಹ್ನ 3.30 ರ ಸುಮಾರಿಗೆ ಅವರು ನಿಧನರಾಗಿದ್ದಾರೆ.
ಇದೀಗ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೇ ಸಾಕಷ್ಟು ಸಂಖ್ಯೆಯಲ್ಲಿ ಸಿಪಿಎಂ ಕಾರ್ಯಕರ್ತರು ಆಸ್ಪತ್ರೆ ಹೊರಗೆ ಜಮಾಯಿಸಿದ್ದಾರೆ. ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಬುಧವಾರ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.