Select Your Language

Notifications

webdunia
webdunia
webdunia
webdunia

ಅಯೋಧ್ಯೆಗೆ ತೆರಳಿ ರಾಮಲಲ್ಲಾಗೆ ನಮಿಸಿದ ಕೇರಳ ಗವರ್ನರ್‌ ಆರೀಫ್​ ಖಾನ್

ಅಯೋಧ್ಯೆಗೆ ತೆರಳಿ ರಾಮಲಲ್ಲಾಗೆ ನಮಿಸಿದ ಕೇರಳ ಗವರ್ನರ್‌ ಆರೀಫ್​ ಖಾನ್

Sampriya

ಉತ್ತರಪ್ರದೇಶ , ಗುರುವಾರ, 9 ಮೇ 2024 (14:03 IST)
photo Courtesy X
ಉತ್ತರಪ್ರದೇಶ: ಕೇರಳದ ಗವರ್ನರ್‌ ಆರೀಫ್ ಮೊಹಮ್ಮದ್ ಖಾನ್ ಅವರು ಹಿಂದೂಗಳ ಪವಿತ್ರಾ ಕ್ಷೇತ್ರ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು. ಅವರು ಆ ಕ್ಷೇತ್ರವನ್ನು ಶಾಂತಿಯ ಸ್ಥಳ ಎಂದು ಬಣ್ಣಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೊದಲ್ಲಿ ರಾಜ್ಯಪಾಲರು ರಾಮ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದ ಮಾಹಿತಿಯನ್ನು ನೀಡಿದ್ದಾರೆ. ರಾಮ್ ಲಲ್ಲಾ ವಿಗ್ರಹದ ಮುಂದೆ ರಾಜ್ಯಪಾಲರು ನಮಸ್ಕರಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಅಲ್ಲಿ ಜೈ ಶ್ರೀ ರಾಮ್ ಘೋಷಣೆಗಳು ಕೇಳಿ ಬರುತ್ತಿದ್ದವು.

ಜನವರಿ ತಿಂಗಳಲ್ಲಿ ಪ್ರಾಣ ಪ್ರತಿಷ್ಠೆಗೂ ಮುನ್ನ ಎರಡು ಬಾರಿ ಇಲ್ಲಿಗೆ ಭೇಟಿ ನೀಡಿದ್ದೆ. ನಾನು ಅಯೋಧ್ಯೆಗೆ ಭೇಟಿ ನೀಡುತ್ತಲೇ ಇದ್ದೇನೆ. ಇಲ್ಲಿಗೆ ಬರುವುದು ಮನಸ್ಸಿಗೆ ಶಾಂತಿ ನೀಡುತ್ತದೆ. ಇದು ನಮಗೆ ಕೇವಲ ಸಂತೋಷದ ವಿಷಯವಲ್ಲ, ಬದಲಾಗಿ ಅಯೋಧ್ಯೆಗೆ ಬಂದು ಶ್ರೀರಾಮನನ್ನು ಪೂಜಿಸುತ್ತಿರುವುದು ಹೆಮ್ಮೆ ಎಂದರು.

ಲೋಕಸಭಾ ಚುನಾವಣೆಯ ಹೊತ್ತಿನಲ್ಲೇ ಕೇರಳ ರಾಜ್ಯಪಾಲರ ಅಯೋಧ್ಯೆ ಭೇಟಿಯು ಹಲವು ಚರ್ಚೆಗೆ ಕಾರಣವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆ ಶಿವಕುಮಾರ್ ಎಲ್ಲಾ ಮಾಡುತ್ತಿರುವುದು ಮುಖ್ಯಮಂತ್ರಿ ಪಟ್ಟಕ್ಕಾಗಿ ಎಂದ ಸೋಮಣ್ಣ