ಕೇರಳದ ಪುರಾಣ ಪ್ರಸಿದ್ಧ ಶಬರಿಲೆಯಲ್ಲಿ ಭಾನುವಾರ ಸಂಭವಿಸಿದ ನೂಕುನುಗ್ಗಲಿನಲ್ಲಿ ಕನಿಷ್ಠ 25 ಮಂದಿ ಗಾಯಗೊಂಡಿದ್ದು ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಭಾನುವಾರ ಸಂಜೆಯ ಪೂಜೆ ಸಮಯದಲ್ಲಿ ಮಣಿಕಂಠನಿಗೆ ಥಂಗ ಅಂಗಿಯ ಆಭರಣಗಳನ್ನು ತೊಡಿಸಲಾಗುತ್ತಿತ್ತು. ಆ ಸಮಯದಲ್ಲಿ ಸ್ವಾಮಿಯ ದರ್ಶನಕ್ಕೆ ಭಕ್ತರ ಸಮೂಹ ಕಾತರಿಸಿದ್ದರಿಂದ ದೇಗುಲದಲ್ಲಿ ನೂಕುನುಗ್ಗಲು ಉಂಟಾಗಿ ಹಲವರು ಗಾಯಗೊಂಡರು.
ಗಂಭೀರವಾಗಿ ಗಾಯಗೊಂಡಿರುವವರಿಗೆ ಪಂಬಾದಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಹೆಚ್ಚಿನವರು ಆಂಧ್ರದವರೆಂದು ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!