Webdunia - Bharat's app for daily news and videos

Install App

ವರದಕ್ಷಿಣೆ ಕಿರುಕುಳದ ಸಂದೇಶ ನೀಡಿದ್ದ ಯುವತಿ ಶವವಾಗಿ ಪತ್ತೆ

Webdunia
ಗುರುವಾರ, 24 ಜೂನ್ 2021 (14:40 IST)
ತಿರುವನಂತಪುರ: ತನ್ನ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾನೆ ಎಂದು ವ್ಯಾಟ್ಸಪ್ ಮೂಲಕ ಹೆತ್ತವರಿಗೆ ಫೋಟೋ ಸಮೇತ ಸಂದೇಶ ಕಳುಹಿಸಿದ್ದ 24 ವರ್ಷದ ಯುವತಿ ಕೆಲವೇ ಗಂಟೆಗಳಲ್ಲಿ ಶವವಾಗಿ ಪತ್ತೆಯಾದ ಘಟನೆ ಕೇರಳದಲ್ಲಿ ನಡೆದಿದೆ.


ಈ ಪ್ರಕರಣವೀಗ ಭಾರೀ ವೈರಲ್ ಆಗಿದೆ. ನನಗೆ ಇನ್ನಷ್ಟು ವರದಕ್ಷಿಣೆ ತರುವಂತೆ ಪತಿ ಹಿಂಸೆ ಮಾಡುತ್ತಿದ್ದಾನೆ ಎಂದು ಯುವತಿ ಗಾಯದ ಗುರುತಿನ ಫೋಟೋ ಸಮೇತ ಹೆತ್ತವರಿಗೆ ಸಂದೇಶ ಕಳುಹಿಸಿದ್ದಳು. ಇದಾದ ಕೆಲವೇ ಗಂಟೆಗಳಲ್ಲಿ ಆಕೆ ಮನೆಯ ಬಾತ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಆಯುರ್ವೇದ ವೈದ್ಯ ವೃತ್ತಿ ತರಬೇತಿ ಪಡೆಯುತ್ತಿದ್ದ ಯುವತಿಗೆ ಕಳೆದ ವರ್ಷ ಕಿರಣ್ ಕುಮಾರ್ ಎಂಬಾತನ ಜೊತೆ ವಿವಾಹವಾಗಿತ್ತು. ವಿವಾಹದ ಸಂದರ್ಭದಲ್ಲಿಯೇ 100 ಚಿನ್ನದ ನಾಣ್ಯ, 1 ಎಕರೆ ಜಮೀನು, 10 ಲಕ್ಷ ರೂ. ಮೌಲ್ಯದ ಕಾರು ವರದಕ್ಷಿಣೆಯಾಗಿ ನೀಡಲಾಗಿತ್ತು. ಹಾಗಿದ್ದರೂ ಅಳಿಯ ಮಗಳಿಗೆ ಕಿರುಕುಳ ನೀಡುತ್ತಿದ್ದ ಎಂದು ಪೋಷಕರು ಪೊಲೀಸರಿಗೆ ದೂರಿದ್ದಾರೆ. ಈ ಘಟನೆ ಬಗ್ಗೆ ಸ್ವತಃ  ಕೇರಳ ಸಿಎಂ ಪಿಣರಾಯಿ ವಿಜಯನ್ ಕೂಡಾ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments