Select Your Language

Notifications

webdunia
webdunia
webdunia
webdunia

ಹೆಣ್ಣು ಮಗು ಹುಟ್ಟಿದ್ದಕ್ಕೆ ಆ್ಯಸಿಡ್ ಕುಡಿಸಿ ಹತ್ಯೆ!

ಹೆಣ್ಣು ಮಗು ಹುಟ್ಟಿದ್ದಕ್ಕೆ ಆ್ಯಸಿಡ್ ಕುಡಿಸಿ ಹತ್ಯೆ!
ಗುವಾಹಟಿ , ಭಾನುವಾರ, 17 ಜುಲೈ 2022 (10:46 IST)
ಗುವಾಹಟಿ : ಮಹಿಳೆಯೊಬ್ಬಳು ಹೆಣ್ಣು ಮಗುವನ್ನು ಹೆತ್ತಿದ್ದಕ್ಕೆ ಆಕೆಯ ಪತಿ ಹಾಗೂ ಅತ್ತೆ ಬಲವಂತವಾಗಿ ಆ್ಯಸಿಡ್ ಕುಡಿಸಿ ಹತ್ಯೆ ಮಾಡಿದ ಘಟನೆ ಅಸ್ಸಾಂನ ಕರೀಮ್ಗಂಜ್ ಜಿಲ್ಲೆಯಲ್ಲಿ ನಡೆದಿದೆ.

ಕರೀಂಗಂಜ್ ಜಿಲ್ಲೆಯ ರತಾಬರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಭೈರಬ್ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಸುಮ್ನಾ ಬೇಗಂ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧಿಸಿ ಪತಿ ಶಕೀಲ್ ಅಹ್ಮದ್ನನ್ನು ಬಂಧಿಸಲಾಗಿದೆ.

ಸುಮ್ನಾ ಬೇಗಂಗೆ ಕೆಲವು ದಿನಗಳಿಂದ ಗಂಡು ಮಗು ಜನಿಸಬೇಕು ಎಂದು ಆಕೆಯ ಅತ್ತೆ ಹಾಗೂ ಪತಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಹಿಂಸೆಯನ್ನು ನೀಡುತ್ತಿದ್ದರು. ಆದರೆ ಆಕೆಗೆ ಹೆಣ್ಣು ಮಗು ಜನಿಸಿತ್ತು. ಇದರಿಂದ ಪತಿ ಹಾಗೂ ಆತನ ಕುಟುಂಬಸ್ಥರು ಅವಳಿಗೆ ಬಲವಂತವಾಗಿ ಆ್ಯಸಿಡ್ ಕುಡಿಸಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಯಾಣಿಕರಿಗೆ ಹೊಸ ಗೈಡ್‍ಲೈನ್?