ಪ್ರಯಾಗ್‌ರಾಜ್ (ಉತ್ತರ ಪ್ರದೇಶ): ಭೂತಾನ್ ರಾಜ ಜಿಗ್ಮೆ ಖೇಸರ್ ನಾಮ್ಗೈಲ್ ವಾಂಗ್‌ಚುಕ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಪ್ರಯಾಗರಾಜ್‌ನಲ್ಲಿರುವ ತ್ರಿವೇಣಿ ಸಂಗಮದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮಹಾ ಕುಂಭಮೇಳದಲ್ಲಿ ಪಾಲ್ಗೊಳ್ಳಲು ಯೋಗಿ ಆದಿತ್ಯನಾಥ್ ಅವರೊಂದಿಗೆ ಭೂತಾನ್ ರಾಜ ಪ್ರಯಾಗ್‌ರಾಜ್‌ಗೆ ಆಗಮಿಸಿದರು.
ಇದಕ್ಕೂ ಮುನ್ನ ಲಖನೌ ವಿಮಾನ ನಿಲ್ದಾಣದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಜಿಗ್ಮೆ ಖೇಸರ್ ನಾಮ್ಗೈಲ್ ವಾಂಗ್‌ಚುಕ್ ಅವರನ್ನು ಸ್ವಾಗತಿಸಿ ಪುಷ್ಪಗುಚ್ಛವನ್ನು ನೀಡಿದರು. ನಂತರ ಇಬ್ಬರು ಗಣ್ಯರು ಪ್ರಯಾಗ್‌ರಾಜ್‌ಗೆ ಪ್ರಯಾಣಿಸಲು ವಿಮಾನವನ್ನು ಏರಿದರು.
ಭೂತಾನ್ ರಾಜ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಸೋಮವಾರ ಲಕ್ನೋಗೆ ಆಗಮಿಸಿದ್ದರು. ಸಿಎಂ ಯೋಗಿ ಅವರಿಗೆ ಆತ್ಮೀಯ ಸ್ವಾಗತ ಕೋರಿದರು. ಸಾಂಪ್ರದಾಯಿಕ ಸಂಗೀತ ಮತ್ತು ನೃತ್ಯದೊಂದಿಗೆ ಅವರನ್ನು ಸ್ವಾಗತಿಸಲಾಯಿತು.
ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ ಸಿಎಂ ಯೋಗಿ ಆದಿತ್ಯನಾಥ್ ಅವರು, "ಶೌರ್ಯ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸಾಮರಸ್ಯದ ಪವಿತ್ರ ಭೂಮಿ ಉತ್ತರ ಪ್ರದೇಶದ ಭೂತಾನ್‌ನ ಹಿಸ್ ಮೆಜೆಸ್ಟಿ ಕಿಂಗ್ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್‌ಚುಕ್ ಅವರಿಗೆ ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳು! ಎಂದು ಬರೆದುಕೊಂಡಿದ್ದಾರೆ.
ಜನವರಿ 13 ರಂದು ಪ್ರಾರಂಭವಾದ ಮಹಾ ಕುಂಭ 2025 ಫೆಬ್ರವರಿ 26 ರವರೆಗೆ ಮುಂದುವರಿಯುತ್ತದೆ. ಈವೆಂಟ್ ಈಗಾಗಲೇ ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತ ಲಕ್ಷಾಂತರ ಭಕ್ತರನ್ನು ಆಕರ್ಷಿಸಿದೆ ಮತ್ತು ಹಾಜರಾತಿ ಮತ್ತು ಭಾಗವಹಿಸುವಿಕೆಗಾಗಿ ಹೊಸ ದಾಖಲೆಗಳನ್ನು ಸ್ಥಾಪಿಸುವ ನಿರೀಕ್ಷೆಯಿದೆ.<>