Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿಗಳ ಮೇಲೆ ಚಾಕು ಇರಿತ!

ಪರೀಕ್ಷೆ
ನವದೆಹಲಿ : ನಾಲ್ವರು ವಿದ್ಯಾರ್ಥಿಗಳಿಗೆ ಚಾಕುವಿನಿಂದ ಇನ್ನೊಂದು ಶಾಲೆಯ ವಿದ್ಯಾರ್ಥಿಗಳು ಇರಿದಿರುವ ಘಟನೆ ಪೂರ್ವ ದೆಹಲಿಯಲ್ಲಿ ನಡೆದಿದೆ.
 
ಶುಕ್ರವಾರ ಮಯೂರ್ ವಿಹಾರ್ನಲ್ಲಿ 10ನೇ ತರಗತಿಯ ಪರೀಕ್ಷೆ ಬರೆದು ಹೊರಗೆ ವಿದ್ಯಾರ್ಥಿಗಳು ಬರುತ್ತಿದ್ದರು. ಅವರು ಹೊರಬರುವುದನ್ನೇ ಕಾಯುತ್ತಿದ್ದ ಇನ್ನೊಂದು ಶಾಲೆಯ ವಿದ್ಯಾರ್ಥಿಗಳು ನಾಲ್ಕು ವಿದ್ಯಾರ್ಥಿಗಳನ್ನು ಬೆನ್ನಟ್ಟಿದ್ದಾರೆ.

ಇದನ್ನು ಅರಿತ ಆ ವಿದ್ಯಾರ್ಥಿಗಳು ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ. ಆದರೂ ಅವರನ್ನು ಬಿಡದೇ ಈ ವಿದ್ಯಾರ್ಥಿಗಳು ಅಟ್ಯಾಕ್ ಮಾಡಿ ಚಾಕುವಿನಿಂದ ಇರಿದಿದ್ದಾರೆ.

ಈ ಕುರಿತು ಅಧಿಕಾರಿಗಳು ಮಾತನಾಡಿದ್ದು, ಗಾಯಗೊಂಡ ಮೂವರು ವಿದ್ಯಾರ್ಥಿಗಳು ಎಲ್ಬಿಎಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ನಂತರ ಬಿಡುಗಡೆ ಮಾಡಲಾಗಿದೆ. ಇನ್ನೊಬ್ಬ ವಿದ್ಯಾರ್ಥಿ ಏಮ್ಸ್ ಟ್ರಾಮಾ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಗಾಯಗೊಂಡ ಎಲ್ಲ ವಿದ್ಯಾರ್ಥಿಗಳು 15 ರಿಂದ 16 ವರ್ಷದೊಳಗಿನವರು ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊಡಗಿನಲ್ಲಿ ಕೋವಿಡ್ ಸ್ಫೋಟ!