ಬೀದರ್: ರಾಜ್ಯ ರಾಜಕರಾಣದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಗುದ್ದಾಟ ಬೆನ್ನಲ್ಲೇ ಬೀದರ್‌ನಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯವನ್ನು ನುಡಿದಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯಿಲ್ಲ. ಯುಗಾದಿವರೆಗೂ ಸರ್ಕಾರ ಏನೂ ಬದಲಾವಣೆ ಆಗೋದಿಲ್ಲ ಎಂದರು.
ಇದೀಗ ಉದ್ಭವಿಸಿರುವ ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯನವರೇ ಬಿಟ್ಟುಕೊಟ್ಟರೆ ಬೇರೆಯವರು ಆಗಬಹುದು. ಆದರೆ, ಸಿಎಂ ಸಿದ್ದರಾಮಯ್ಯ ಬದಲಾವಣೆ ಯಾರ ಕೈಯಲ್ಲೂ ಮಾಡೋಕೆ ಆಗಲ್ಲ ಎಂದರು.
ಸಿದ್ದರಾಮಯ್ಯ ಅವರು ಸಿಎಂ ಸ್ಥಾನವನ್ನು ಬಿಟ್ಟು ಕೊಡುವುದು ಇಲ್ಲ, ಇಳಿಯೋದು ಇಲ್ಲ. ಯುಗಾದಿ ಕಳೆದ ಮೇಲೆ ಸಿಎಂ ಬದಲಾವಣೆ ಬಗ್ಗೆ ಹೇಳ್ತೇನೆ. ಸಿಎಂ ಆಕಾಂಕ್ಷಿಯಾಗಿರುವ ಡಿ.ಕೆ.ಶಿವಕುಮಾರ್ ನಮಗೆ ಬೇಕಾದವರು. ಆದರೆ, ಸಿಎಂ ರೇಸ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಜಿ.ಪರಮೇಶ್ವರ್ ಸೇರಿದಂತೆ ಇನ್ನೂ ಹಲವರು ಇದ್ದಾರೆ. ದಿವ್ಯ ಯೋಗ ಯಾರಿಗೆ ಇದೆಯೋ ಅವರು ಸಿಎಂ ಆಗುತ್ತಾರೆ. ಆದರೆ, ಸಿಎಂ ಅವರನ್ನು ಸದ್ಯಕ್ಕೆ ಇಳಿಸೋದು ಕಷ್ಟ ಎಂದು ಭವಿಷ್ಯ ನುಡಿದರು.