ಕೋಲ್ಕತ್ತಾ ವೈದ್ಯೆ ಹತ್ಯೆ ಆರೋಪಿ ಸಂಜಯ್ ರಾಯ್ ಲಾಯರ್ ಬಳಿ ಹೇಳಿದ ಶಾಕಿಂಗ್ ವಿಚಾರಗಳು

Krishnaveni K
ಮಂಗಳವಾರ, 3 ಸೆಪ್ಟಂಬರ್ 2024 (11:51 IST)
ಕೋಲ್ಕತ್ತಾ: ಆರ್ ಜಿ ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ರೇಪ್ ಆಂಡ್ ಮರ್ಡರ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಆರೋಪಿ ಸಂಜಯ್ ರಾಯ್ ತನ್ನ ವಕೀಲರ ಮುಂದೆ ತಾನು ಅಪರಾಧಿಯಲ್ಲ ಎಂದು ಹೇಳಿಕೊಂಡಿದ್ದಾನೆ. ಆತ ಹೇಳಿದ್ದೇನು ಎಂಬ ಅಂಶ ಈಗ ಬಯಲಾಗಿದೆ.

ಕೋಲ್ಕತ್ತಾದಲ್ಲಿ ನಡೆದ ಈ ಕೃತ್ಯ ಬಗ್ಗೆ ಇಡೀ ದೇಶವೇ ಆಕ್ರೋಶ ವ್ಯಕ್ತಪಡಿಸಿತ್ತು. ಕೃತ್ಯ ನಡೆದ ಸ್ಥಳದಲ್ಲಿ ಸಿಕ್ಕ ಬ್ಲೂ ಟೂತ್ ಸ್ಪೀಕರ್, ಸಿಸಿಟಿವಿ ದೃಶ್ಯಗಳನ್ನಾಧರಿಸಿ ಸಂಜಯ್ ರಾಯ್ ಆರೋಪಿ ಎಂದು ಬಂಧಿಸಲಾಗಿತ್ತು. ಆದರೆ ಆತ ಮಾತ್ರ ತಾನು ನಿರಪರಾಧಿ ಎಂದು ಹೇಳುತ್ತಲೇ ಇದ್ದಾನೆ.

ಇದೀಗ ತನ್ನ ಲಾಯರ್ ಬಳಿಯೂ ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ತಾನು ಸೆಮಿನಾರ್ ಹಾಲ್ ಗೆ ಹೋಗುವಾಗಲೇ ಆಕೆ ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ತನ್ನನ್ನು ಈ ಕೇಸ್ ನಲ್ಲಿ ಸಿಲುಕಿಸಲಾಗುತ್ತಿದೆ ಎಂದು ಆತ ಹೇಳಿಕೊಂಡಿದ್ದಾನೆ ಎಂದು ಆತನ ಪರ ವಕೀಲೆ ಕವಿತಾ ಸರ್ಕಾರ್ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಆರ್ ಜಿ ಕರ್ ಮೆಡಿಕಲ್ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಇತರೆ ಮೂವರನ್ನು ಬಂಧಿಸಿದೆ. ಆರ್ ಜಿಕರ್ ಆಸ್ಪತ್ರೆಯಲ್ಲಿ ನಡೆಯುತ್ತಿತ್ತು ಎನ್ನಲಾದ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments