ಕೋಲ್ಕತ್ತಾ ವೈದ್ಯೆ ರೇಪ್, ಮರ್ಡರ್ ಮಾಡಿದ ಆರೋಪಿ ಸಂಜಯ್ ತನ್ನ ಪತ್ನಿಗೇ ಯಾವ ಪರಿ ಕಾಟ ಕೊಟ್ಟಿದ್ದ ಗೊತ್ತಾ

Krishnaveni K
ಮಂಗಳವಾರ, 20 ಆಗಸ್ಟ್ 2024 (13:46 IST)
ಕೋಲ್ಕತ್ತಾ: ಆರ್ ಜಿ  ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲೆ ರೇಪ್ ಮಾಡಿ ಹತ್ಯೆ ಮಾಡಿದ್ದ ಆರೋಪದಲ್ಲಿ ಬಂಧಿತನಾಗಿರುವ ಸಂಜಯ್ ರಾಯ್ ಬಗ್ಗೆ ಆತನ ಅತ್ತೆ ಭಯಾನಕ ವಿಚಾರವನ್ನು ಹೊರಗಿಟ್ಟಿದ್ದಾರೆ.

ಸಂಜಯ್ ರಾಯ್ ಗೆ ಈಗಾಗಲೇ ಮದುವೆಯಾಗಿತ್ತು. ಆದರೆ ಆತ ತನ್ನ ಹೆಂಡತಿಯನ್ನು ನಡೆಸಿಕೊಂಡ ಬಗ್ಗೆ ಆತನ ಅತ್ತೆ ಬಾಯ್ಬಿಟ್ಟಿದ್ದಾರೆ. ಆಕೆ ಗರ್ಭಿಣಿಯಾಗಿದ್ದಾಗ ಆಕೆಯ ಹೊಟ್ಟೆಗೆ ಒದ್ದು ಗರ್ಭಪಾತಕ್ಕೆ ಕಾರಣವಾಗಿದ್ದ ಎಂದು ಪತ್ನಿಯ ತಾಯಿ ಹೇಳಿಕೊಂಡಿದ್ದಾರೆ.

ಸಂಜಯ್ ಮತ್ತು ಪತ್ನಿ ಮದುವೆಯಾಗಿ ಎರಡು ವರ್ಷವಾಗಿತ್ತು. ಮೊದಲ ಆರು ತಿಂಗಳು ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ಪತ್ನಿ ಮೂರು ತಿಂಗಳ ಗರ್ಭಿಣಿಯಾಗಿದ್ದಳು. ಈ ವೇಳೆ ಸಂಜಯ್ ಆಕೆಯ ಹೊಟ್ಟೆಗೆ ಒದ್ದು ಆಕೆಯ ಗರ್ಭಪಾತಕ್ಕೆ ಕಾರಣವಾಗಿದ್ದ. ಈ ಬಗ್ಗೆ ಪೊಲೀಸರಿಗೂ ದೂರು ನೀಡಿದ್ದೆವು ಎಂದು ಅತ್ತೆ ಹೇಳಿದ್ದಾರೆ. ಈಗ ಸಂಜಯ್ ಪತ್ನಿ ತಾಯಿ ಜೊತೆಗಿದ್ದು ಆಕೆ ಅನಾರೋಗ್ಯದಿಂದ ಬಳಲಲುತ್ತಿದ್ದಾರೆ ಎನ್ನಲಾಗಿದೆ.

ಸಂಜಯ್ ರಾಯ್ ಗೆ ಅಶ್ಲೀಲ ವಿಡಿಯೋ ನೋಡುವ ಚಟವಿತ್ತು. ಆತನ ಮೊಬೈಲ್ ನಲ್ಲೂ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದವು ಎನ್ನಲಾಗಿದೆ. ಈತ ಆಸ್ಪತ್ರೆಯಲ್ಲಿರುವ ಬೇರೆ ಹೆಣ್ಣು ಮಕ್ಕಳ ಜೊತೆಯೂ ಅನುಚಿತವಾಗಿ  ವರ್ತಿಸುತ್ತಿದ್ದ ಎಂದು ಈಗ ಒಂದೊಂದೇ ವಿಚಾರಗಳು ಬಯಲಾಗುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಅಣ್ಣನೂ ಸಿಎಂ ಆಗಬೇಕು ಎನ್ನೋದೇ ನನ್ನಾಸೆ: ಡಿಕೆ ಸುರೇಶ್

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಕೊಟ್ಟ ಹಣದ ಕಂತೆಯೆಷ್ಟು: ಬಿ ಶ್ರೀರಾಮುಲು ಬಾಂಬ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಗಮನಿಸಿ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments