ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

Sampriya
ಶುಕ್ರವಾರ, 27 ಜೂನ್ 2025 (20:56 IST)
ಪಶ್ಚಿಮ ಬಂಗಾಳದ ಕೋಲ್ಕತ್ತಾದ ಕಾನೂನು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಯು ಮೊಬೈಲ್ ಫೋನ್‌ನಲ್ಲಿ ಹಲ್ಲೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. 

ಅದಲ್ಲದೆ ನಡೆದ ಘಟನೆಯನ್ನು ಯಾರಿಗಾದರೂ ಹೇಳಿದರೆ ಆನ್‌ಲೈನ್‌ನಲ್ಲಿ ದೃಶ್ಯಗಳನ್ನು ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್  ಮೂಲಗಳಿಂದ ತಿಳಿದುಬಂದಿದೆ. 

"ಮೂವರು ಆರೋಪಿಗಳು ಹಲ್ಲೆಯ ಮೊಬೈಲ್ ದೃಶ್ಯಗಳನ್ನು ಇಟ್ಟುಕೊಂಡಿದ್ದಾರೆ ಮತ್ತು ಘಟನೆಯ ಬಗ್ಗೆ ಯಾರೊಂದಿಗಾದರೂ ಮಾತನಾಡಿದರೆ ಅದನ್ನು ಅಂತರ್ಜಾಲದಲ್ಲಿ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ" ಎಂದು ಪೊಲೀಸ್ ಮೂಲಗಳು ಪಿಟಿಐಗೆ ತಿಳಿಸಿವೆ.

ಮೂವರು ಆರೋಪಿಗಳ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ ಸಂತ್ರಸ್ತೆ ಅತ್ಯಾಚಾರ ಮಾಡಬೇಡಿ ಎಂದು ಕಾಲು ಹಿಡಿದು ಬೇಡಿಕೊಂಡರು ಅವರು ಕೇಳಲಿಲ್ಲ ಎಂದು ಸಂತ್ರಸ್ತೆ ನೋವು ತೋಡಿಕೊಂಡಿದ್ದಾಳೆ.

ಶುಕ್ರವಾರ ನೀಡಿದ ಪೊಲೀಸ್ ಹೇಳಿಕೆಯ ಪ್ರಕಾರ, ಕಾನೂನು ಕಾಲೇಜು ಆವರಣದಲ್ಲಿ ಈ ಘಟನೆ ನಡೆದಿದ್ದು, ಹಳೆ ವಿದ್ಯಾರ್ಥಿಯೊಬ್ಬರು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಜೂನ್ 25 ರಂದು ಬುಧವಾರ ದಕ್ಷಿಣ ಕೋಲ್ಕತ್ತಾದ ಕಾಲೇಜು ಕಟ್ಟಡದ ನೆಲ ಮಹಡಿಯಲ್ಲಿರುವ ಗಾರ್ಡ್ ರೂಮ್‌ನಲ್ಲಿ ಈ ಘಟನೆ ಸಂಭವಿಸಿದೆ

ಎಲ್ಲಾ ಮೂವರು ಆರೋಪಿಗಳನ್ನು ಬಂಧಿಸಿ ಅಲಿಪುರದ ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಜುಲೈ 1 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ಮೊನೊಜಿತ್ ಮಿಶ್ರಾ (31) ಮತ್ತು ವಿದ್ಯಾರ್ಥಿಗಳಾದ ಜೈಬ್ ಅಹ್ಮದ್ (19) ಮತ್ತು ಪ್ರಮಿತ್ ಮುಖರ್ಜಿ (20) ಎಂದು ಗುರುತಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments