Select Your Language

Notifications

webdunia
webdunia
webdunia
webdunia

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ: ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅರೆಸ್ಟ್‌

Medical student rape and murder case

Sampriya

ಕೋಲ್ಕತ್ತ , ಭಾನುವಾರ, 15 ಸೆಪ್ಟಂಬರ್ 2024 (10:38 IST)
Photo Courtesy X
ಕೋಲ್ಕತ್ತ: ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ನಾಶ ಆರೋಪದ ಮೇಲೆ ಆರ್‌.ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಸಿಬಿಐ ಬಂಧಿಸಿದೆ.

ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘೋಷ್‌ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರನ್ನು ಕೇಂದ್ರ ತನಿಖಾ ದಳ ಶನಿವಾರ ಬಂಧಿಸಿದೆ.

ಪ್ರಕರಣದಲ್ಲಿ ತಲಾ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ಅಭಿಜಿತ್ ಮೊಂಡಲ್ ಅವರನ್ನೂ ಸಿಬಿಐ ಬಂಧಿಸಿದೆ. ಎಫ್‌ಐಆರ್‌ ದಾಖಲಿಸಲು ವಿಳಂಬ, ಸಾಕ್ಷ್ಯ ನಾಶ ಮತ್ತು ಪ್ರಕರಣದ ದಾರಿ ತಪ್ಪಿಸಿದ ಆರೋಪ ಅವರ ಮೇಲಿದೆ.

ಆರ್.ಜಿ. ಕರ್ ಕಾಲೇಜಿನ ಸಭಾಂಗಣದಲ್ಲಿ ಆ.9ರಂದು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಆಕೆಯ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ, ಕಾಲೇಜಿನಲ್ಲಿ ಹಣಕಾಸು ಅವ್ಯವಹಾರ ನಡೆದಿರುವ ಆರೋಪವು ಕೇಳಿ ಬಂದಿತ್ತು. ಈ ಆರೋಪದ ಮೇಲೆ ಸೆ.2 ರಂದು ಘೋಷ್‌ ಅವರನ್ನು ಸಿಬಿಐ ಬಂಧಿಸಿತ್ತು.

ವೈದ್ಯ ವಿದ್ಯಾರ್ಥಿನಿಯರ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೀತಾರಾಮ್‌ ಯೆಚೂರಿ ಮೃತದೇಹ ಕೆಂಪು ಬಾವುಟದಲ್ಲಿ ಸುತ್ತಿ ಏಮ್ಸ್‌ಗೆ ಹಸ್ತಾಂತರ