ರಾಜ್ಯದ ಆಡಳಿತದ ಹೊಣೆ ಹೊತ್ತಿರುವ ಮುಖ್ಯಮಂತ್ರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಕೊರೊನಾ ತಡೆಗೆ ಅವಿರತವಾಗಿ ಶ್ರಮಿಸುತ್ತಿದ್ದ ಸಿಎಂಗೆ ಕೊರೊನಾ ವೈರಸ್ ದೃಢಪಟ್ಟಿದೆ.
ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ತಪ್ಪದೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.