Select Your Language

Notifications

webdunia
webdunia
webdunia
webdunia

ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್!

ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್!
ಉತ್ತರ ಪ್ರದೇಶ , ಭಾನುವಾರ, 17 ಏಪ್ರಿಲ್ 2022 (13:31 IST)
ಲಕ್ನೋ : ಉತ್ತರ ಪ್ರದೇಶದ ಗಾಜಿಯಾಬಾದ್ ಮತ್ತು ಗೌತಮ್ ಬುದ್ಧ ನಗರದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು,

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಎನ್ಸಿಆರ್ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಈ ಕುರಿತು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ತುರ್ತು ಸಭೆ ನಡೆಸಲಾಗಿದ್ದು, ಹಲವು ನಿರ್ದೇಶನಗಳನ್ನೂ ನೀಡಿದ್ದಾರೆ.

ಕೆಲ ದಿನಗಳಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ಇದರಿಂದ ಎನ್ಸಿಆರ್ ಜಿಲ್ಲೆಗಳ ಮೇಲೂ ಪರಿಣಾಮ ಬೀರಿದೆ. ಈ ನಿಟ್ಟಿನಲ್ಲಿ ಕೋವಿಡ್-19 ಸೋಂಕಿತರ ಮಾದರಿಯನ್ನು ಪರೀಕ್ಷಿಸುವಂತೆ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅಧಿಕಾರಿ ಮೂಲಗಳು ಹೇಳಿವೆ. 

ಕೋವಿಡ್ ಪ್ರಕರಣಗಳನ್ನು ಶೀಘ್ರವೇ ಪತ್ತೆಹಚ್ಚಲು ಸೋಂಕಿತರ ಮಾದರಿ ಪರೀಕ್ಷೆಗಳನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿ, ಬೇಗನೇ ವರದಿ ಪಡೆಯಬೇಕು.

Share this Story:

Follow Webdunia kannada

ಮುಂದಿನ ಸುದ್ದಿ

ರಷ್ಯಾದಿಂದ ಭಾರತಕ್ಕೆ ಬಂತು ಕ್ಷಿಪಣಿ