ನವದೆಹಲಿ : ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಗುರುವಾರ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ವಹಿಸುವಂತೆ ಜೈಶಂಕರ್ ಟ್ವೀಟ್ನಲ್ಲಿ ತಿಳಿಸಿದ್ದಾರೆ. ನನಗೆ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಇರುವುದು ತಿಳಿದುಬಂದಿದೆ.
ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಮುನ್ನೆಚ್ಚರಿಕೆಯ ಕ್ರಮವನ್ನು ಕೈಗೊಳ್ಳಬೇಕಾಗಿ ಒತ್ತಾಯಿಸುತ್ತೇನೆ ಎಂದು ಜೈಶಂಕರ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.