Webdunia - Bharat's app for daily news and videos

Install App

ಕುಮಾರಸ್ವಾಮಿ ಕೂಡಲೆ ಹೇಳಿಕೆಯನ್ನು ವಾಪಸ್ ಪಡೆಯಬೇಕು : ಶೋಭಾ ಕರಂದ್ಲಾಜೆ

Webdunia
ಶುಕ್ರವಾರ, 8 ಅಕ್ಟೋಬರ್ 2021 (12:24 IST)
ಚಿಕ್ಕಮಗಳೂರು : ಆರ್ ಎಸ್ ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ. ಡಿ.ಕುಮಾರಸ್ವಾಮಿ ಅವರು ಬೇಜವಾಬ್ದಾರಿ ಮಾತುಗಳನ್ನಾಡುತ್ತಿದ್ದು ಕೂಡಲೆ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಆರ್ ಎಸ್ ಎಸ್ ಸಾಂಸ್ಕøತಿಕ ಮತ್ತು ದೇಶಭಕ್ತ ಸಂಘಟನೆ ಇದರ ವಿರುದ್ಧ ಕುಮಾರಸ್ವಾಮಿ ಅನಗತ್ಯ ಆರೋಪ ಮಾಡಿದ್ದಾರೆ ಎಂದರು.
ದತ್ತಪೀಠದ ವಿಚಾರದಲ್ಲಿ ಹಲವಾರು ವರ್ಷಗಳ ಹೋರಾಟ ಮಾಡಿದ್ದೇವೆ. ಪ್ರಕರಣ ಸುಪ್ರೀಂಕೋರ್ಟ್ ವರೆಗೆ ಹೋಗಿ ವಾಪಸ್ ಬಂದಿದೆ ಹೈಕೋರ್ಟ್ ತೀರ್ಪಿನ ಅನ್ವಯ ರಾಜ್ಯ ಸರ್ಕಾರ ಈಗ ಸಚಿವರ ಸಮಿತಿಯೊಂದನ್ನು ರಚಿಸಿದ್ದು ತಕ್ಷಣ ಹಿಂದೂ ಅರ್ಚಕರನ್ನು ನೇಮಿಸಿ ಪೂಜಾ ಕಾರ್ಯಗಳನ್ನು ನಡೆಸಬೇಕು.
ವರ್ಷಪೂರ್ತಿ ದತ್ತ ಪಾದುಕೆಗಳ ದರ್ಶನ ಆಗಬೇಕು,ಆದಷ್ಟು ಬೇಗನೆ ವರ್ಷಪೂರ್ತಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಪ್ರಯತ್ನಿಸಲಿದೆ ಎಂದರು. ಒಂದು ಕೋಮಿನವರು ಮತ್ತೊಂದು ಕೋಮಿನವರ ಅಂಗಡಿಗಳಿಗೆ ವ್ಯಾಪಾರಕ್ಕೆ ಹೋಗಬಾರದು ಎಂದು ಪತ್ವ ಹೊರಡಿಸಿದರೆ ದೇಶದ್ರೋಹ ವಾಗುತ್ತದೆ.
ಉಡುಪಿಯ ಗಂಗೊಳ್ಳಿಯಲ್ಲಿ ಇಂತಹ ಆಜ್ಞೆ ಮಾಡಿರುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು. ಉತ್ತರ ಪ್ರದೇಶದ ಘಟನೆ ದುರದೃಷ್ಟಕರ ಘಟನೆಯ ತನಿಖೆಗೆ ಸರ್ಕಾರ ಸಮಿತಿ ರಚಿಸಿದ್ದು ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments