Select Your Language

Notifications

webdunia
webdunia
webdunia
webdunia

ಬಿಜೆಪಿ ವಿರುದ್ಧ ಜಾತ್ಯಾತೀತ ಶಕ್ತಿಗಳು ಒಂದಾಗಬೇಕು: ಲಾಲು ಯಾದವ್

ಬಿಜೆಪಿ ವಿರುದ್ಧ ಜಾತ್ಯಾತೀತ ಶಕ್ತಿಗಳು ಒಂದಾಗಬೇಕು: ಲಾಲು ಯಾದವ್
ಕೋಲ್ಕತಾ , ಶುಕ್ರವಾರ, 27 ಮೇ 2016 (19:49 IST)
ಪ್ರಧಾನಿ ಮೋದಿ ಸರಕಾರದಿಂದ ದೇಶ ಇಬ್ಬಾಗವಾಗುವುದನ್ನು ತಡೆಯಲು ಎಲ್ಲಾ ಜಾತ್ಯಾತೀತ ಪಕ್ಷಗಳು ಒಂದಾಗಿ ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಹೋರಾಟ ನಡೆಸಬೇಕು ಎಂದು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕರೆ ನೀಡಿದ್ದಾರೆ.
 
ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಜಮ್ಮು ಕಾಶ್ಮಿರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಮಾತನಾಡಿ, ಜಾತ್ಯಾತೀತ ಪಕ್ಷಗಳು ಒಂದಾಗಿ ಮಮತಾ ಬ್ಯಾನರ್ಜಿಯಂತಹ ನಾಯಕಿಯನ್ನು ಮುಖ್ಯಸ್ಥೆಯಾಗಿಸಬೇಕು ಎಂದು ಅಭಿಪ್ರಾಯಪಟ್ಟರು,  
 
ಒಂದೇ ತೆರನಾದ ಜಾತ್ಯಾತೀತ ಸಿದ್ದಾಂತಗಳನ್ನು ಹೊಂದಿರುವ ಪಕ್ಷಗಳು ಒಂದಾಗಿ ಬಿಜೆಪಿ ಮತ್ತು ಆರೆಸ್ಸೆಸ್ ದೂರಿವಿರಿಸಬೇಕು. ಆದ್ದರಿಂದ ಪ್ರತಿಯೊಂದು ಪಕ್ಷಗಳ ನಾಯಕರು ಒಂದು ಕಡೆ ಸೇರಿ ಅರ್ಥಪೂರ್ಣವಾದ ಚರ್ಚೆ ನಡೆಸುವುದು ಸೂಕ್ತ ಎಂದರು.
 
ಒಂದು ವೇಳೆ, ನಾವು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳದಿದ್ದಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ದೇಶವನ್ನು ವಿಭಜಿಸುವುದು ಖಚಿತ ಎಂದು ಅಬ್ದುಲ್ಲಾ ಎಚ್ಚರಿಕೆ ನೀಡಿದರು.
 
ಫಾರೂಕ್ ಅಬ್ದುಲ್ಲಾ ಹೇಳಿಕೆಗೆ ಸಮ್ಮತಿ ಸೂಚಿಸಿದ ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್, ನಾವೆಲ್ಲಾ ಒಂದು ಕಡೆ ಕುಳಿತು ದೇಶದ ಹಿತಾಸಕ್ತಿಗೆ ಅನುಗುಣವಾಗಿ ಉತ್ತಮ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ ಎಂದರು. 
 
ಮುಂಬರುವ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ಪರ್ಯಾಯವಾಗಿ ತೃತಿಯ ರಂಗ ಉದ್ಭವಾಗುವುದು ಖಚಿತ. ತೃತಿಯ ರಂಗದಿಂದಲೇ ದೇಶ ನಾಶವನ್ನು ಉಳಿಸಲು ಸಾಧ್ಯ ಎಂದು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ತಿಳಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣ ವಚನ