Select Your Language

Notifications

webdunia
webdunia
webdunia
webdunia

ಚುನಾವಣೆಗೆ ಲಾಲೂ ಪ್ರಸಾದ್ ಯಾದವ್ ಸ್ಪರ್ಧೆ

ಚುನಾವಣೆಗೆ ಲಾಲೂ ಪ್ರಸಾದ್ ಯಾದವ್ ಸ್ಪರ್ಧೆ
ಪಾಟ್ನಾ , ಸೋಮವಾರ, 13 ಜೂನ್ 2022 (08:11 IST)
ಪಾಟ್ನಾ : ಮುಂದಿನ ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಕಣಕ್ಕಿಳಿಯಲು ಲಾಲೂ ಪ್ರಸಾದ್ ಯಾದವ್ ಸಿದ್ಧತೆ ನಡೆಸಿದ್ದಾರೆ.

ಆದರೆ ಇವರು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥರಲ್ಲ. ಇವರು ಬಿಹಾರದ ಸರನ್ ಜಿಲ್ಲೆಯ ನಿವಾಸಿಯಾಗಿದ್ದಾರೆ. ಜೂನ್ 15ರಂದು ನಾಮಪತ್ರ ಸಲ್ಲಿಸುವ ಸಲುವಾಗಿ ದೆಹಲಿಗೆ ತೆರಳಲು ವಿಮಾನದ ಟಿಕೆಟ್ ಸಹ ಬುಕ್ ಮಾಡಿರುವುದಾಗಿ ತಿಳಿಸಿದ್ದಾರೆ. 

ಲಾಲೂ ಪ್ರಸಾದ್ ಯಾದವ್ ಚುನಾವಣೆಗೆ ಸ್ಪರ್ಧಿಸುತ್ತಿರುವುದು ಇದೇ ಮೊದಲೇನಲ್ಲ. 2017ರಲ್ಲಿಯೂ ಅವರು ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು.

ಅಂದಿನ ಬಿಹಾರದ ರಾಜ್ಯಪಾಲ ರಾಮನಾಥ ಕೋವಿಂದ್ ಹಾಗೂ ಬಿಹಾರದವರೇ ಆದ ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು. ಈ ಪೈಕಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು. 

ರಾಜಕೀಯ ಇತಿಹಾಸದಲ್ಲಿ ಸತತವಾಗಿ ಚುನಾವಣೆಗಳಲ್ಲಿ ಸ್ಫರ್ಧಿಸುತ್ತಿದ್ದೂ ಸೋಲುತ್ತಲೇ ಇರುವುದರಿಂದ ಕೆಲವರು ಪ್ರಚಾರದ ಸಲುವಾಗಿಯೇ ಚುನಾವಣಾ ಕಣಕ್ಕೆ ಧುಮುಕುತ್ತಾರೆ. ಅಂಥವರ ಸಾಲಿಗೆ ಲಾಲೂ ಪ್ರಸಾದ್ ಸೇರಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಆದರೆ ತಮ್ಮ ವಿರುದ್ಧದ ಟೀಕೆಗಳಿಗೆ ತಲೆಕೆಡಿಸಿಕೊಳ್ಳದ ಯಾದವ್ ಸತತ ಒಂದಿಲ್ಲೊಂದು ಚುನಾವಣೆಯಲ್ಲಿ ಸ್ಪರ್ಧಿಸುತ್ತಲೇ ಇದ್ದಾರೆ.

ಇಷ್ಟಾದರೂ ಅವರು ಚುನಾವಣೆಯ ಆಸಕ್ತಿ ಕಳೆದುಕೊಂಡಿರಲಿಲ್ಲ. 2019ರ ಚುನಾವಣೆಯಲ್ಲಿ ಮತ್ತೆ ಕಣಕ್ಕಿಳಿದಿದ್ದರು. ಆಗ ಸುಮಾರು 6 ಸಾವಿರ ಮತಗಳನ್ನು ಪಡೆದುಕೊಂಡಿದ್ದರು. ಇದೀಗ ಮತ್ತೆ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ದೂರದೃಷ್ಟಿಯ ಯೋಜನೆಯನ್ನು ರೂಪಿಸಲು ವಿಷನ್ ಡಾಕ್ಯುಮೆಂಟ್: CM