ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ವಿರುದ್ಧ ಸಿಬಿಐ ಹೊಸ ಪ್ರಕರಣ ದಾಖಲಿಸಿಕೊಂಡು ಮತ್ತೆ ಮನೆ ಸೇರಿದಂತೆ 15 ಕಡೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಮೇವು ಹಗರಣದ 5ನೇ ಪ್ರಕರಣದಲ್ಲೂ ಲಾಲೂ ಪ್ರಸಾದ್ ಯಾದವ್ ಜಾಮೀನು ಪಡೆದು ವಾರ ಕಳೆಯುವಷ್ಟರಲ್ಲಿ ಸಿಬಿಐ ಮತ್ತೊಮ್ಮೆ ದಾಳಿ ನಡೆಸಿದೆ.
2004 ಮತ್ತು 2009ರ ನಡುವೆ ರೈಲ್ವೆ ಸಚಿವರಾಗಿದ್ದಾಗ ಲಾಲೂ ಪ್ರಸಾದ್ ಯಾದವ್ ಅಧಿಕಾರ ದುರುಪಯೋಗ ಮಾಡಿದ್ದಾರೆ ಎಂದು ಸಿಬಿಐ ಹೊಸ ಪ್ರಕರಣ ದಾಖಲಿಸಿಕೊಂಡಿದೆ.
ಹೊಸ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್ ಅಲ್ಲದೇ, ಪತ್ನಿ ರಾಬ್ಡಿ ದೇವಿ, ಪುತ್ರಿ ಅವರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಶುಕ್ರವಾರ ಬೆಳ್ಳಂಬೆಳಗ್ಗೆ 15 ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ.