Select Your Language

Notifications

webdunia
webdunia
webdunia
webdunia

ಲಾಲೂ ಪ್ರಸಾದ್ ಯಾದವ್ ಜೈಲು ಪಾಲಾದ್ದು ನೋಡಿ ಸಹೋದರಿ ಸಾವು!

ಲಾಲೂ ಪ್ರಸಾದ್ ಯಾದವ್
ನವದೆಹಲಿ: ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ತಮ್ಮ, ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಸ್ಥಿತಿ ನೋಡಿ ಸಹೋದರಿ ಗಂಗೋತ್ರಿ ದೇವಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
 

ಸಿಬಿಐ ವಿಶೇಷ ನ್ಯಾಯಾಲಯ ಲಾಲೂ ಯಾದವ್ ಗೆ ಮೂರೂವರೆ ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಶಿಕ್ಷೆ ಪ್ರಮಾಣ ಪ್ರಕಟವಾಗುವ ದಿನ ಗಂಗೋತ್ರಿ ದೇವಿ ಇಡೀ ದಿನ ದೇವರ ಪ್ರಾರ್ಥನೆಯಲ್ಲಿ ತೊಡಗಿದ್ದರಂತೆ.

ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದಿದ್ದ ಗಂಗೋತ್ರಿ ದೇವಿ ತಮ್ಮನ ಶಿಕ್ಷೆ ಪ್ರಮಾಣ ಪ್ರಕಟವಾಗುತ್ತಿದ್ದಂತೆ ಹೃದಯಾಘಾತಕ್ಕೊಳಗಾಗಿ ಅಸುನೀಗಿದ್ದಾರೆ. ಇದೀಗ ಆಕೆಯ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಲಾಲೂ ಯಾದವ್ ಗೆ ಪೆರೋಲ್ ನೀಡುವಂತೆ ಸಂಬಂಧಿಕರು ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಗ್ನಿ ಅವಘಡದ ಹಿನ್ನಲೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಕೊಟ್ಟ ಸೂಚನೆ ಏನು...?