Select Your Language

Notifications

webdunia
webdunia
webdunia
webdunia

ಅರುಣಾಚಲ ಪ್ರದೇಶದಲ್ಲಿ ಭೂಕುಸಿತ: 14 ಮಂದಿ ಸಾವು

ಅರುಣಾಚಲ ಪ್ರದೇಶದಲ್ಲಿ ಭೂಕುಸಿತ: 14 ಮಂದಿ ಸಾವು
ಲಟಾಪ್ , ಮಂಗಳವಾರ, 11 ಜುಲೈ 2017 (19:07 IST)
ಅರುಣಾಚಲ ಪ್ರದೇಶದಲ್ಲಿ ಗುಡ್ಡ ಕುಸಿದಿದ್ದಿರಿಂದ 14 ಕ್ಕೂ ಹೆಚ್ಚು ಸಾವನ್ನಪ್ಪಿದ ದಾರುಣ ಘಟನೆ ವರದಿಯಾಗಿದೆ. ಅವಶೇಷಗಳಡಿ ಮತ್ತಷ್ಟು ಜನರು ಸಿಲುಕಿರುವ ಶಂಕೆಯಿದೆ ಎಂದು ಮೂಲಗಳು ತಿಳಿಸಿವೆ.
 
ಗುಡ್ಡವೊಂದು ಶಾಲಾ ಕಟ್ಟಡದ ಮೇಲೆ ಕುಸಿದಿದೆ. ಅದೃಷ್ಟವಶಾತ್ ಶಾಲೆಗೆ ಇಂದು ರಜೆಯಿದ್ದರಿಂದ ಶಾಲಾ ಮಕ್ಕಳು ಬಹುದೊಡ್ಡ ದುರಂತದಿಂದ ಪಾರಾಗಿದ್ದಾರೆ. ಇಲ್ಲವಾದಲ್ಲಿ ಸಾವು ನೋವು ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಅವಶೇಷಗಳಡಿ ಸಿಲುಕಿದವರನ್ನು ಹೊರತೆಗೆಯಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪರಿಹಾರ ಕಾರ್ಯಗಳು ಆರಂಭವಾಗಿವೆ ಎಂದು ಜಿಲ್ಲಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 
ಅರುಣಾಚಲ ಪ್ರದೇಶದಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಟ್ಟ ಗುಡ್ಡಗಳು ಕುಸಿಯುವುದು ಸರ್ವೇಸಾಮಾನ್ಯವಾಗಿದೆ. ಸರಕಾರ ಆದಷ್ಟು ಹಾನಿಯಾಗದಂತೆ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಾಡಿ ಮಸಾಜ್ ಪಾರ್ಲರ್‌ಗಳ ಮೇಲೆ ಮೇಯರ್ ದಾಳಿ