Webdunia - Bharat's app for daily news and videos

Install App

ವ್ಯಾಪಂ ಹಗರಣ ಸಿಲ್ಲಿ ವಿಷಯ, ಪ್ರಧಾನಿ ಹೇಳಿಕೆ ನೀಡುವ ಅಗತ್ಯವಿಲ್ಲ: ಸದಾನಂದಗೌಡ

Webdunia
ಮಂಗಳವಾರ, 7 ಜುಲೈ 2015 (14:36 IST)
ಮಧ್ಯಪ್ರದೇಶದಲ್ಲಿ ನಡೆದ ವ್ಯಾಪಂ ಹಗರಣದಲ್ಲಿ ಸುಮಾರು 48 ಜನ ಅಸಹಜ ಸಾವನ್ನಪ್ಪಿದ್ದಾರೆ. ನೂರಾರು ಕೋಟಿ ರೂಪಾಇಗಳ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳಿವೆ. ಆದರೆ, ಕೇಂದ್ರ ಕಾನೂನು ಸಚಿವ ಸದಾನಂದಗೌಡ ಮಾತ್ರ ಇದೊಂದು ಸಿಲ್ಲಿ ವಿಷಯ. ಇದರ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿಕೆ ನೀಡುವ ಅಗತ್ಯವಿಲ್ಲ ಎಂದು ಹೇಳಿ ತಮಗಿರುವ ಅಜ್ಞಾನವನ್ನು ಮೆರೆದಿದ್ದಾರೆ.  
 
ಮಧ್ಯಪ್ರದೇಶದಲ್ಲಿ ನಡೆದಿರುವ ವ್ಯಾಪಂ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯ ಮೌನದ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಾನೂನು ಸಚಿವ ಡಿ.ವಿ.ಸದಾನಂದಗೌಡ, ಇದೊಂದು ಸಿಲ್ಲಿ ವಿಷಯ ಪ್ರಧಾನಿಯವರು ಹೇಳಿಕೆ ನೀಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.   
 
ವ್ಯಾಪಂ ಹಗರಣದ ಬಗ್ಗೆ ರಾಜ್ಯ ಸರಕಾರ ತನಿಖೆಗೆ ಆದೇಶಿಸಿದೆ. ವ್ಯಾಪಂ ಹಗರಣದಲ್ಲಿ ಅಸಹಜ ಸಾವುಗಳು ಸಂಭವಿಸುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ಕಾನೂನು ಸುವ್ಯವಸ್ಥೆ ರಾಜ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ. ಪ್ರಧಾನಿ ಇಂತಹ ಸಿಲ್ಲಿ ವಿಷಯಗಳ ಬಗ್ಗೆ ಹೇಳಿಕೆ ನೀಡುವುದು ಸರಿಯಲ್ಲ ಎಂದರು.
 
ವ್ಯಾಪಂ ಹಗರಣದ ಬಗ್ಗೆ ಸಂಬಂಧಪಟ್ಟ ಸಚಿವರು ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಈಗಾಗಲೇ ಹೇಳಿಕೆ ನೀಡಿದ್ದಾರೆ. ಪ್ರತಿಯೊಂದು ಸಿಲ್ಲಿ ವಿಷಯಗಳಿಗೆ ಪ್ರಧಾನಮಂತ್ರಿ ಉತ್ತರಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
 
ವ್ಯಾಪಂ ಹಗರಣದ ರೂವಾರಿ ಮಧ್ಯಪ್ರದೇಶಧ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರನ್ನು ಕೂಡಲೇ ವಜಾಗೊಳಿಸಿ ಪಾರದರ್ಶಕ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments