ಅಬ್ಬಾಬ್ಬಾ ಮನೆಯೊಳಗೆ ನುಗ್ಗಿದ ಚಿರತೆ: ಐವರ ಮೇಲೆ ದಾಳಿ

Sampriya
ಸೋಮವಾರ, 1 ಏಪ್ರಿಲ್ 2024 (16:05 IST)
Photo Courtesy X
ದೆಹಲಿ: ನಗರದ ವಜೀರಾಬಾದ್‌ನ ಹಳ್ಳಿಯ ಮನೆಯೊಂದಕ್ಕೆ ನುಗ್ಗಿದ ದಾಳಿ ಮಾಡಿದ ಪರಿಣಾಮ ಐವರು ಗಾಯಗೊಂಡಿರುವ ಘಟನೆ ನಡೆದಿದೆ.

ಇಂದು ಬೆಳಿಗ್ಗೆ ಜಗತ್‌ಪುರ ಗ್ರಾಮದ ಮನೆಯೊಂದರ ಟೆರೇಸ್‌ನಲ್ಲಿ ಚಿರತೆ ಕಾಣಿಸಿದೆ. ಇದನ್ನು ನೋಡಿದ ಜನರು ಭಯ ಬಿದ್ದು ಓಡಾಲು ಶುರು ಮಾಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ದೆಹಲಿ ಅಗ್ನಿಶಾಮಕ ಸೇವೆಯ ಪ್ರಕಾರ, ಇಂದು ಬೆಳಿಗ್ಗೆ ಮನೆಯೊಂದರಲ್ಲಿ ಕಾಣಿಸಿಕೊಂಡ ಚಿರತೆಯನ್ನು ಸ್ಥಳೀಯರ ಸಹಾಯದಿಂದ ರಕ್ಷಣೆ ಮಾಡಲಾಯಿತು. ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ.

ಉಪ ಪೊಲೀಸ್ ಆಯುಕ್ತ (ಉತ್ತರ) ಎಂ ಕೆ ಮೀನಾ ಮಾತನಾಡಿ, ಚಿರತೆ ಮನೆಗೆ ನುಗ್ಗಿರುವ ಕುರಿತು ಜಗತ್‌ಪುರ ಗ್ರಾಮದಿಂದ ಕರೆ ಬಂದಿದ್ದು, ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಚಿರತೆ ದಾಳಿಯಿಂದ ಐವರು ಗಾಯಗೊಂಡಿದ್ದು, ಮೂವರನ್ನು ಮಹೇಂದರ್, ಆಕಾಶ್ ಮತ್ತು ರಾಂಪಾಲ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಏಳು ಸಿಬ್ಬಂದಿ, ದೆಹಲಿ ಅಗ್ನಿಶಾಮಕ ಇಲಾಖೆಯ ತಂಡ ಮತ್ತು ಸ್ಥಳೀಯ ಪೊಲೀಸರು ಸ್ಥಳದಲ್ಲಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments