Publish Date: Fri, 03 Mar 2023 (08:52 IST)
Updated Date: Fri, 03 Mar 2023 (09:54 IST)
ಬೆಂಗಳೂರು : ಲೋಕಾಯುಕ್ತ ಸರ್ವ ಸ್ವತಂತ್ರವಾಗಿ ಕೆಲಸ ಮಾಡಲಿ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುವಂತೆ ತನಿಖೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಗನ ಮೇಲೆ ಲೋಕಾಯುಕ್ತ ದಾಳಿ ಹಿನ್ನೆಲೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಾವು ಲೋಕಾಯುಕ್ತ ಪುನರ್ ಸ್ಥಾಪನೆ ಮಾಡಿರೋದೇ ಭ್ರಷ್ಟಾಚಾರ ತಡೆಯೋಕೆ. ಹಿಂದೆ ಲೋಕಾಯುಕ್ತ ಇಲ್ಲದೇ ಕಾಂಗ್ರೆಸ್ ಕಾಲದ ಕೇಸ್ ಗಳು ಮುಚ್ಚಿಹೋಯ್ತು. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ತಿಳಿಸಿದರು.
ಇದೇ ವೇಳೆ ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಅವರ ಕಾಲದ ಹಗರಣಗಳನ್ನ ತನಿಖೆ ಮಾಡಲಿ. ಲೋಕಾಯುಕ್ತ ಇರೋದೇ ಭ್ರಷ್ಟಾಚಾರ ನಿಯಂತ್ರಣ ಮಾಡೋಕೆ. ಯಾವ್ಯಾವ ಹಗರಣ ಇದೆ ಎಲ್ಲಾ ತನಿಖೆಯಾಗುತ್ತೆ. ನಾವು ಯಾರನ್ನೂ ರಕ್ಷಣೆ ಮಾಡಲ್ಲ ಎಂದರು.