Select Your Language

Notifications

webdunia
webdunia
webdunia
webdunia

ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿ : ಆಜಾದ್

ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿ : ಆಜಾದ್
ಶ್ರೀನಗರ , ಸೋಮವಾರ, 7 ನವೆಂಬರ್ 2022 (08:29 IST)
ಶ್ರೀನಗರ : ಕಾಂಗ್ರೆಸ್ನಿಂದ ಬೇರ್ಪಟ್ಟ ನಂತರ ಸತತವಾಗಿ ವಾಗ್ದಾಳಿ ನಡೆಸುತ್ತಿದ್ದ ಕಾಂಗ್ರೆಸ್ ಮಾಜಿ ನಾಯಕ ಗುಲಾಂ ನಬಿ ಆಜಾದ್,

ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲೆಂದು ನಾನು ಈಗಲೂ ಬಯಸುತ್ತೇನೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಶ್ರೀನಗರದಲ್ಲಿ ಮಾತನಾಡಿರುವ ಅವರು, ನಾನು ಕಾಂಗ್ರೆಸ್ನಿಂದ ಬೇರ್ಪಟ್ಟಿದ್ದರೂ ಎಂದೂ ಅದರ ಜಾತ್ಯತೀತ ಸಿದ್ಧಾಂತದ ವಿರುದ್ಧ ಇರಲಿಲ್ಲ. ಪಕ್ಷದ ವ್ಯವಸ್ಥೆ ದುರ್ಬಲವಾಗುತ್ತಿದ್ದರಿಂದ ನಾನು ಬೇರ್ಪಟ್ಟೆ ಅಷ್ಟೇ.

ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಬೇಕೆಂದು ನಾನು ಬಯಸುತ್ತೇನೆ. ಅಲ್ಲಿ ಆಮ್ ಆದ್ಮಿ ಪಕ್ಷ ಗೆಲ್ಲಲು ಸಾಧ್ಯವಿಲ್ಲ ಎಂದೂ ಭವಿಷ್ಯ ನುಡಿದಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಅಪರೂಪದ ಬಾಲವಿಲ್ಲದ ಸನ್ ಫಿಶ್ ಪತ್ತೆ