ಪಿತೂರಿ ಹಿಂದಿರುವವರನ್ನು ಮಟ್ಟಹಾಕುದ್ದೇವೆ: ದೆಹಲಿ ಸ್ಫೋಟದ ಕುರಿತು ಮೋದಿ ವಾರ್ನಿಂಗ್‌

Sampriya
ಬುಧವಾರ, 12 ನವೆಂಬರ್ 2025 (15:44 IST)
ನವದೆಹಲಿ: ದೆಹಲಿ ಸ್ಫೋಟದ ಪಿತೂರಿಯ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ವಾರ್ನಿಂಗ್‌ ನೀಡಿದ್ದಾರೆ. 

ದೆಹಲಿಯಲ್ಲಿ ಈಚೆಗೆ ಸಂಭವಿಸಿದ ಭೀಕರ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. 

ಮೋದಿ ಅವರು ಭೂತಾನ್‌ ಪ್ರವಾಸದಿಂದ ಮರಳಿದ ಕೂಡಲೇ ದೆಹಲಿಯ ಲೋಕ ನಾಯಕ್ ಜೈ ಪ್ರಕಾಶ್ ಆಸ್ಪತ್ರೆಗೆ ಭೇಟಿ ನೀಡಿದರು. ಕೆಂಪು ಕೋಟೆ ಬಳಿ ನಡೆದ ಸ್ಫೋಟದಲ್ಲಿ ಗಾಯಗೊಂಡವರನ್ನು ಭೇಟಿಯಾದರು.

ಎರಡು ದಿನಗಳ ಭೂತಾನ್ ಪ್ರವಾಸದಲ್ಲಿದ್ದ ಪ್ರಧಾನಿ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ, ಅಲ್ಲಿಂದ ನೇರವಾಗಿ ಆಸ್ಪತ್ರೆಗೆ ತೆರಳಿದರು. ಗಾಯಾಳುಗಳನ್ನು ಪ್ರತ್ಯೇಕವಾಗಿ ಭೇಟಿಯಾದ ಪ್ರಧಾನಿ ಮೋದಿ, ಅವರೆಲ್ಲರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

ಈ ಕುರಿತಾಗಿ ತಮ್ಮ ಎಕ್ಸ್​ ಖಾತೆಯ ಮೂಲಕ ಪೋಸ್ಟ್​ ಹಂಚಿಕೊಂಡಿರುವ ಪ್ರಧಾನಿ ಮೋದಿ, ದೆಹಲಿಯಲ್ಲಿ ನಡೆದ ಸ್ಫೋಟದ ಸಂದರ್ಭದಲ್ಲಿ ಗಾಯಗೊಂಡವರನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ಹೋಗಿ ಭೇಟಿಯಾದೆ. ಎಲ್ಲರೂ ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments