Select Your Language

Notifications

webdunia
webdunia
webdunia
webdunia

ಕಳಪೆ ಔಷಧಿಗಳ ತಯಾರಿಕೆ 18 ಕಂಪನಿಗಳ ಪರವಾನಗಿ ರದ್ದು

ಕಳಪೆ ಔಷಧಿಗಳ ತಯಾರಿಕೆ 18 ಕಂಪನಿಗಳ ಪರವಾನಗಿ ರದ್ದು
ನವದೆಹಲಿ , ಗುರುವಾರ, 30 ಮಾರ್ಚ್ 2023 (09:21 IST)
ನವದೆಹಲಿ : ನಕಲಿ ಹಾಗೂ ಕಳಪೆ ಗುಣಮಟ್ಟದ ಔಷಧ ತಯಾರಿಸುತ್ತಿದ್ದ ಕಂಪನಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, 18 ಕಂಪನಿಗಳ ಪರವಾನಗಿಯನ್ನ ರದ್ದುಗೊಳಿಸಿವೆ.
 
ಬರೋಬ್ಬರಿ 20 ರಾಜ್ಯಗಳ 76 ಕಂಪನಿಗಳಿಗೆ ಸೇರಿದ ಸ್ಥಳಗಳಲ್ಲಿ ಭಾರತೀಯ ಔಷಧಿ ನಿಯಂತ್ರಣ ಮಹಾ ನಿರ್ದೇಶನಾಲಯ ಹಾಗೂ ವಿವಿಧ ರಾಜ್ಯ ಸರ್ಕಾರಗಳು ಜಂಟಿ ಕಾರ್ಯಾಚರಣೆ ನಡೆಸಿದ ಬಳಿಕ 18 ಕಂಪನಿಗಳ ಪರವಾನಗಿಯನ್ನು ಸರ್ಕಾರ ರದ್ದುಗೊಳಿಸಿದೆ. ಆದರೆ ಪರವಾನಗಿ ರದ್ದುಗೊಳಿಸಿರುವ ಕಂಪನಿಗಳ ಹೆಸರನ್ನು ಬಹಿರಂಗಪಡಿಸಿಲ್ಲ. 

ಕಳಪೆ ಗುಣಮಟ್ಟದ ಔಷಧಗಳನ್ನು ತಯಾರಿಸುತ್ತಿದ್ದ 76 ಕಂಪನಿಗಳ ಮೇಲೆ ಮೊದಲ ಹಂತದಲ್ಲಿ ಡ್ರಗ್ಸ್ ಅಂಡ್ ಕಾಸ್ಮೆಟಿಕ್ಸ್ ಆಕ್ಟ್ 1940ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದೆ. 18 ಕಂಪನಿಗಳ ಪರವಾನಗಿ ರದ್ದು ಮಾಡಿರುವುದಲ್ಲದೇ, 26 ಕಂಪನಿಗಳಿಗೆ ಶೋಕಾಸ್ ನೋಟಿಸ್ ಜಾರಿಮಾಡಲಾಗಿದೆ. 3 ಕಂಪನಿಗಳ ಕೆಲವು ಉತ್ಪನ್ನಗಳಿಗೆ ನೀಡಿದ್ದ ಅನುಮತಿ ರದ್ದು ಮಾಡಲಾಗಿದೆ. ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 15 ದಿನಗಳಿಂದ ಈ ಕಾರ್ಯಾಚರಣೆ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣದಲ್ಲಿ ಏರಿಕೆ!