Publish Date: Wed, 26 Apr 2023 (11:48 IST)
Updated Date: Wed, 26 Apr 2023 (11:51 IST)
ಲಕ್ನೋ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಟೋಲ್ ಫ್ರೀ ಸಂಖ್ಯೆ 112ಕ್ಕೆ ಸಂದೇಶ ಕಳುಹಿಸಿ ಕೊಲೆ ಬೆದರಿಕೆ ಹಾಕಲಾಗಿದೆ.
ಉತ್ತರ ಪ್ರದೇಶದ 112 ವಾಟ್ಸಾಪ್ ಗ್ರೂಪ್ನಲ್ಲಿ ಜೀವ ಬೆದರಿಕೆಯ ಸಂದೇಶ ರವಾನೆಯಾಗಿದ್ದು, ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಸದ್ಯ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆದರಿಕೆ ಸಂದೇಶದಲ್ಲಿ ಆರೋಪಿ ಮುಖ್ಯಮಂತ್ರಿ ಯೋಗಿಯನ್ನು ಕೊಲ್ಲುವುದಾಗಿ ಬರೆದಿದ್ದಾನೆ. ಸಂದೇಶವನ್ನು ಸ್ವೀಕರಿಸಿದ ತಕ್ಷಣ ಪೊಲೀಸರು ಎಡಿಜಿ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಗುಪ್ತಚರ ಇಲಾಖೆ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.