ಮದ್ಯ ಹಂಚಿಕೆ: ಬಿಜೆಪಿ ಪಕ್ಷದಿಂದ ಜಗದೀಶ್ ಚೌಧರಿ 6 ವರ್ಷ ಉಚ್ಛಾಟನೆ

Sampriya
ಮಂಗಳವಾರ, 9 ಜುಲೈ 2024 (19:11 IST)
ಬೆಂಗಳೂರು: ನೆಲಮಂಗಲದಲ್ಲಿ ನಡೆದ ನೂತನ ಸಂಸದ ಡಾ.ಕೆ.ಸುಧಾಕರ್‌ ಅವರ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ ಮಾಡಿ, ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದ್ದಕ್ಕೆ  ಮಂಡಲ ಅಧ್ಯಕ್ಷ ಜಗದೀಶ್ ಚೌಧರಿಯನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.  

ಈ ಬಗ್ಗೆ ಬೆಂಗಳೂರು ಗ್ರಾಮಾಂತರದ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಅವರು ಜಗದೀಶ್ ಅವರಿಗೆ ನೋಟಿಸ್ ನೀಡಿದ್ದಾರೆ.  

ಅದರಲ್ಲಿ ನೆಲಮಂಗಲ ತಾಲ್ಲೂಕಿನ ಭಾವಿಕೆರೆ ಬಳಿ ಆಯೋಜಿಸಿದ್ದ ನೂತನ ಸಂಸದರ ಸನ್ಮಾನ ಸಮಾರಂಭದಲ್ಲಿ ಸಾರ್ವಜನಿಕವಾಗಿ ಮದ್ಯವನ್ನು ಹಂಚಿರುವುದು ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿದ್ದು, ಇದು ಪಕ್ಷಕ್ಕೆ ಮುಜುಗರವನ್ನು ತಂದಿರುತ್ತದೆ ಮತ್ತು ಇದು ಪಕ್ಷದ ನೀತಿ, ತತ್ವ ಸಿದ್ಧಾಂತಗಳಿಗೆ ಹಾಗೂ ಇದು ಪಕ್ಷದ ಶಿಸ್ತಿನ ಸ್ಪಷ್ಟ ಉಲ್ಲಂಘಟನೆಯಾಗಿದೆ.

ಆದ್ದರಿಂದ ಮಾನ್ಯ ರಾಜ್ಯ ಅಧ್ಯಕ್ಷರ ಸೂಚನೆಯ ಮೇರೆಗೆ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಲ್ಲಿ ಕುರ್ಚಿ ಜಟಾಪಟಿ ನಡುವೆ ರಾಷ್ಟ್ರೀಯ ನಾಯಕರ ಭೇಟಿಯಾದ ವಿಜಯೇಂದ್ರ

ಸಿಎಂ ಆಗಲು ಮತ್ತೊಂದು ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ನಿಮ್ಮ ಸಿಎಂ ಯುದ್ಧಕ್ಕೆ ಬಿಜೆಪಿ ಹೇಗೆ ಕಾರಣವಾಗುತ್ತೆ: ರಣದೀಪ್ ಸುರ್ಜೇವಾಲಗೆ ಆರ್ ಅಶೋಕ್ ಪ್ರಶ್ನೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments