Select Your Language

Notifications

webdunia
webdunia
webdunia
webdunia

ಮದ್ಯ ಹಗರಣ: ಕೇಜ್ರಿವಾಲ್‌ಗೆ ರಕ್ಷಣೆ ನೀಡಲು ಹೈಕೋರ್ಟ್‌ ನಿರಾಕರಣೆ

ಮದ್ಯ ಹಗರಣ: ಕೇಜ್ರಿವಾಲ್‌ಗೆ ರಕ್ಷಣೆ ನೀಡಲು ಹೈಕೋರ್ಟ್‌ ನಿರಾಕರಣೆ

Sampriya

ನವದೆಹಲಿ: , ಗುರುವಾರ, 21 ಮಾರ್ಚ್ 2024 (17:50 IST)
Photo Courtesy X
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಇ.ಡಿ. ತನ್ನ ವಿರುದ್ಧ ಯಾವುದೇ ಬಲವಂತದ ಕ್ರಮ ಕೊಳ್ಳುವುದರ ವಿರುದ್ಧ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ರಕ್ಷಣೆ ನೀಡಲು ನಿರಾಕರಿಸಿದೆ.

ಗುರುವಾರ  ದೆಹಲಿ ಹೈಕೋರ್ಟ್‌ನ ವಿಭಾಗೀಯ ಪೀಠ, ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿ, ಈ ಹಂತದಲ್ಲಿ ಮಧ್ಯಂತರ ಪರಿಹಾರವನ್ನು ನೀಡಲು ನಾವು ಒಲವು ತೋರುವುದಿಲ್ಲ ಎಂದಿದ್ದಾರೆ.

ನ್ಯಾಯಾಲಯವು ಈ ಹೊಸ ಮಧ್ಯಂತರ ಮನವಿಯ ಕುರಿತು ಇಡಿಯಿಂದ ಪ್ರತಿಕ್ರಿಯೆಯನ್ನು ಕೋರಿದ್ದು, ಏಪ್ರಿಲ್ 22 ಕ್ಕೆ ವಿಷಯವನ್ನು ಪಟ್ಟಿ ಮಾಡಿದೆ.

ಅರವಿಂದ್ ಕೇಜ್ರಿವಾಲ್ ತಮ್ಮ ಅರ್ಜಿಯಲ್ಲಿ ಬಂಧನದ ಭೀತಿಯನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಬಂಧನದಿಂದ ರಕ್ಷಣೆ ಕೋರಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸುರೇಶ್ ಕುಮಾರ್ ಕಯಾತ್ ಅವರ ಪೀಠವು ಇಂದು ಈ ಪ್ರಕರಣದ ವಿಚಾರಣೆ ನಡೆಸಿದರು.

ಈ ಹಂತದಲ್ಲಿ ಕೇಜ್ರಿವಾಲ್‌ಗೆ ಪರಿಹಾರ ನೀಡಲು ನ್ಯಾಯಾಲಯ ಒಲವು ಹೊಂದಿಲ್ಲ ಎಂದು ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ನೇತೃತ್ವದ ಪೀಠ ಹೇಳಿದೆ.

ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇನೆ ಎಂಬ ತತ್ವದ ಮೇಲೆ ಇಡೀ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಅರವಿಂದ್ ಕೇಜ್ರಿವಾಲ್ ಈಗ ಭ್ರಷ್ಟಾಚಾರ ಹಗರಣದ ತನಿಖೆಯಿಂದ ಓಡಿಹೋಗುತ್ತಿರುವುದು ಎಂತಹ ವಿಪರ್ಯಾಸ, ಅವರು ದೆಹಲಿಯ ಸಿಎಂ ಮತ್ತು ಅವರ ನೇತೃತ್ವದಲ್ಲಿ ಅವರ ಮಂತ್ರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. .ಮದ್ಯ ಹಗರಣದ ತನಿಖೆಗಾಗಿ ಅವರ ಇಬ್ಬರು ಮಂತ್ರಿಗಳು ಜಾಮೀನು ಇಲ್ಲದೆ ಜೈಲಿನಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೆಟ್ರೋ ಟ್ರ್ಯಾಕ್ ಮೇಲೆ ಜಿಗಿದು ವ್ಯಕ್ತಿ ಆತ್ಮಹತ್ಯೆ: ವೈಟ್ ಫೀಲ್ಡ್‌, ಚಲ್ಲಘಟ್ಟಕ್ಕೆ ಸಂಚಾರ ಸ್ಥಗಿತ