Webdunia - Bharat's app for daily news and videos

Install App

ಮದ್ಯ ಹಗರಣ: ಕೇಜ್ರಿವಾಲ್‌ಗೆ ರಕ್ಷಣೆ ನೀಡಲು ಹೈಕೋರ್ಟ್‌ ನಿರಾಕರಣೆ

Sampriya
ಗುರುವಾರ, 21 ಮಾರ್ಚ್ 2024 (17:50 IST)
Photo Courtesy X
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಇ.ಡಿ. ತನ್ನ ವಿರುದ್ಧ ಯಾವುದೇ ಬಲವಂತದ ಕ್ರಮ ಕೊಳ್ಳುವುದರ ವಿರುದ್ಧ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ರಕ್ಷಣೆ ನೀಡಲು ನಿರಾಕರಿಸಿದೆ.

ಗುರುವಾರ  ದೆಹಲಿ ಹೈಕೋರ್ಟ್‌ನ ವಿಭಾಗೀಯ ಪೀಠ, ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿ, ಈ ಹಂತದಲ್ಲಿ ಮಧ್ಯಂತರ ಪರಿಹಾರವನ್ನು ನೀಡಲು ನಾವು ಒಲವು ತೋರುವುದಿಲ್ಲ ಎಂದಿದ್ದಾರೆ.

ನ್ಯಾಯಾಲಯವು ಈ ಹೊಸ ಮಧ್ಯಂತರ ಮನವಿಯ ಕುರಿತು ಇಡಿಯಿಂದ ಪ್ರತಿಕ್ರಿಯೆಯನ್ನು ಕೋರಿದ್ದು, ಏಪ್ರಿಲ್ 22 ಕ್ಕೆ ವಿಷಯವನ್ನು ಪಟ್ಟಿ ಮಾಡಿದೆ.

ಅರವಿಂದ್ ಕೇಜ್ರಿವಾಲ್ ತಮ್ಮ ಅರ್ಜಿಯಲ್ಲಿ ಬಂಧನದ ಭೀತಿಯನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಬಂಧನದಿಂದ ರಕ್ಷಣೆ ಕೋರಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಸುರೇಶ್ ಕುಮಾರ್ ಕಯಾತ್ ಅವರ ಪೀಠವು ಇಂದು ಈ ಪ್ರಕರಣದ ವಿಚಾರಣೆ ನಡೆಸಿದರು.

ಈ ಹಂತದಲ್ಲಿ ಕೇಜ್ರಿವಾಲ್‌ಗೆ ಪರಿಹಾರ ನೀಡಲು ನ್ಯಾಯಾಲಯ ಒಲವು ಹೊಂದಿಲ್ಲ ಎಂದು ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ನೇತೃತ್ವದ ಪೀಠ ಹೇಳಿದೆ.

ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇನೆ ಎಂಬ ತತ್ವದ ಮೇಲೆ ಇಡೀ ರಾಜಕೀಯ ಜೀವನವನ್ನು ಪ್ರಾರಂಭಿಸಿದ ಅರವಿಂದ್ ಕೇಜ್ರಿವಾಲ್ ಈಗ ಭ್ರಷ್ಟಾಚಾರ ಹಗರಣದ ತನಿಖೆಯಿಂದ ಓಡಿಹೋಗುತ್ತಿರುವುದು ಎಂತಹ ವಿಪರ್ಯಾಸ, ಅವರು ದೆಹಲಿಯ ಸಿಎಂ ಮತ್ತು ಅವರ ನೇತೃತ್ವದಲ್ಲಿ ಅವರ ಮಂತ್ರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. .ಮದ್ಯ ಹಗರಣದ ತನಿಖೆಗಾಗಿ ಅವರ ಇಬ್ಬರು ಮಂತ್ರಿಗಳು ಜಾಮೀನು ಇಲ್ಲದೆ ಜೈಲಿನಲ್ಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments