Select Your Language

Notifications

webdunia
webdunia
webdunia
webdunia

ಕೊನೆಯ ಹಂತದ ಲೋಕಸಭೆ ಚುನಾವಣೆ ಇಂದು: ಇನ್ನೇನಿದ್ದರೂ ಫಲಿತಾಂಶ ಮಾತ್ರ ಬಾಕಿ

Election

Krishnaveni K

ನವದೆಹಲಿ , ಶನಿವಾರ, 1 ಜೂನ್ 2024 (09:32 IST)
ನವದೆಹಲಿ: ಲೋಕಸಭೆ ಚುನಾವಣೆ 2024 ರಲ್ಲಿ ಇಂದು ಕೊನೆಯ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದಾದ ಬಳಿಕ ಇಡೀ ದೇಶದ ಜನತೆ ಫಲಿತಾಂಶಕ್ಕಾಗಿ ಕಾದು ಕುಳಿತಿದ್ದಾರೆ.

ಇಂದು ಏಳನೇ ಹಂತದ ಚುನಾವಣೆ ನಡೆಯುತ್ತಿದ್ದು ಘಟಾನುಘಟಿಗಳು ಕಣದಲ್ಲಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಬಾಲಿವುಡ್ ನಟಿ ಕಂಗನಾ ರನೌತ್ ಇಂದು ಬೆಳ್ಳಂ ಬೆಳಿಗ್ಗೆಯೇ ಮತ ಚಲಾಯಿಸಿದ್ದಾರೆ. ಮಂಡಿ ಕ್ಷೇತ್ರದಿಂದ ಕಂಗನಾ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ಬಿಹಾರದಲ್ಲಿ ಲಾಲು ಪ್ರಸಾದ್ ಯಾದವ್ ಇಂದು ಕುಟುಂಬ ಸಮೇತ ಬಂದು ಮತ ಚಲಾಯಿಸಿದರು. ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಪಶ್ಚಿಮ ಬಂಗಾಲ, ಬಿಹಾರ, ಪಂಜಾಬ್ ನ ಕೆಲವು ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

ಇಂದು ಸಂಜೆ 7 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅದಾದ ಬಳಿಕ ಎಕ್ಸಿಟ್ ಪೋಲ್ ಫಲಿತಾಂಶಗಳು ಬರಲಿವೆ. ಎಕ್ಸಿಟ್ ಪೋಲ್ ನಲ್ಲಿ ಯಾವ ರಾಜಕೀಯ ಪಕ್ಷದ ಭವಿಷ್ಯ ಏನಾಗಲಿದೆ ಎಂಬ ಸುಳಿವು ಸಿಗಲಿದೆ. ಆದರೆ ಅದಕ್ಕೆ ಮೊದಲು ಚುನಾವಣಾ ಪೂರ್ವ ಸಮೀಕ್ಷಾ ವರದಿ ಪ್ರಕಟಿಸುವಂತಿಲ್ಲ ಎಂದು ಚುನಾವಣಾ ಆಯೋಗ ಆದೇಶಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತ್ರಿವರ್ಣ ಧ್ವಜ ಹಿಡಿದು ಡ್ಯಾನ್ಸ್ ಮಾಡುತ್ತಲೇ ಪ್ರಾಣ ಬಿಟ್ಟ ಯೋಧ, ಚಪ್ಪಾಳೆ ತಟ್ಟುತ್ತಿದ್ದ ಜನ