Select Your Language

Notifications

webdunia
webdunia
webdunia
webdunia

ಲೋಕಸಭಾ ಚುನಾವಣೆ 2024 ಫಲಿತಾಂಶ ಲೈವ್

Lok Sabha Election 2024

Krishnaveni K

ಬೆಂಗಳೂರು , ಮಂಗಳವಾರ, 4 ಜೂನ್ 2024 (08:33 IST)
ಬೆಂಗಳೂರು: ಲೋಕಸಭಾ ಚುನಾವಣೆ 2024 ರ ಮತ ಎಣಿಕೆ ಕಾರ್ಯ ಶುರುವಾಗಿದ್ದು, ಆರಂಭಿಕ ಹಂತದಲ್ಲೇ ಬಿಜೆಪಿ ನೇತೃತ್ವದ ಎನ್ ಡಿಎ ಭರ್ಜರಿ ಮುನ್ನಡೆ ಸಾಧಿಸಿದೆ.

ಎನ್ ಡಿಎ ಮೈತ್ರಿ ಕೂಟ ಮೊದಲ ಅರ್ಧಗಂಟೆ ಅವಧಿಯೊಳಗೇ 140 ಪ್ಲಸ್ ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 40 ಪ್ಲಸ್ ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಎರಡೂ ಒಕ್ಕೂಟಗಳ ನಡುವಿನ ಅಂತರ ಗಮನಾರ್ಹವಾಗಿದೆ. ಇದೀಗ ಯಾರು ಮುನ್ನಡೆಯಲ್ಲಿದ್ದಾರೆ, ಯಾರಿಗೆ ಹಿನ್ನಡೆಯಾಗಿದೆ ಎಂದು ನೋಡುತ್ತಾ ಸಾಗೋಣ.

ಅಮಿತ್ ಶಾ 5 ಲಕ್ಷ ಮತಗಳ ಅಂತರದಿಂದ ಮುನ್ನಡೆ
ಗೃಹಸಚಿವ, ಗಾಂಧಿನಗರದ ಬಿಜೆಪಿ ಅಭ್ಯರ್ಥಿ ಅಮಿತ್ ಶಾ 5 ಲಕ್ಷ ಮತಗಳ ಭರ್ಜರಿ ಅಂತರದಿಂದ ಮುನ್ನಡೆಯಲ್ಲಿದ್ದಾರೆ.


ಉಡುಪಿ ಚಿಕ್ಕಮಗಳೂರಿನಲ್ಲಿ ಶ್ರೀನಿವಾಸ್ ಪೂಜಾರಿ ಮುನ್ನಡೆ
ಉಡುಪಿ ಚಿಕ್ಕಮಗಳೂರಿನಲ್ಲಿ ಶ್ರೀನಿವಾಸ್ ಪೂಜಾರಿಗೆ ಭಾರೀ ಮುನ್ನಡೆ ಕಂಡುಬಂದಿದೆ. ಇಲ್ಲಿ ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆ ಹಿನ್ನಡೆ ಅನುಭವಿಸಿದ್ದಾರೆ.

ಕುಮಾರಸ್ವಾಮಿಗೆ 1 ಲಕ್ಷ ಮತಗಳ ಮುನ್ನಡೆ
ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಮುನ್ನಡೆ ಕಾಪಾಡಿಕೊಂಡು ಬಂದಿದ್ದಾರೆ. ಎಷ್ಟೆಂದರೆ 1 ಲಕ್ಷ ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.

ತೇಜಸ್ವಿ ಸೂರ್ಯಗೆ 60 ಸಾವಿರ ಮತಗಳ ಮುನ್ನಡೆ
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಎದುರು ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ 60 ಸಾವಿರ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಶಾಕ್
ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹಳ ಸ್ಥಾನಗಳ ನಿರೀಕ್ಷೆಯಿಟ್ಟಿತ್ತು. ಆದರೆ ಇಲ್ಲಿ ಎನ್ ಡಿಎಗಿಂತ ಇಂಡಿಯಾ ಒಕ್ಕೂಟ ಮುನ್ನಡೆಯಲ್ಲಿದೆ. ಅಮೇಠಿಯಲ್ಲಿ ಸ್ಮೃತಿ ಇರಾನಿಯೇ ಹಿನ್ನಡೆಯಲ್ಲಿದ್ದಾರೆ. ಉತ್ತರ ಪ್ರದೇಶ ಬಿಜೆಪಿಗೆ ದೊಡ್ಡ ಶಾಕ್ ನೀಡುವ ಸಾಧ್ಯತೆಯಿದೆ.

ಮಧ್ಯಪ್ರದೇಶದಲ್ಲಿ ಕ್ಲೀನ್ ಸ್ವೀಪ್ ನತ್ತ ಬಿಜೆಪಿ
ಮಧ್ಯಪ್ರದೇಶದಲ್ಲಿ ಬಿಜೆಪಿ ಭಾರೀ ಮುನ್ನಡೆಯಲ್ಲಿದ್ದು ಕ್ಲೀನ್ ಸ್ವೀಪ್ ನತ್ತ ಸಾಗಿದೆ.
ಎನ್ ಡಿಎ 291, ಇಂಡಿಯಾ 210
ಒಟ್ಟಾರೆಯಾಗಿ ಎನ್ ಡಿಎ 291 ಸ್ಥಾನಗಳಲ್ಲಿ ಮತ್ತು ಇಂಡಿಯಾ ಒಕ್ಕೂಟ 210 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಇತರರು 42 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ.

ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಮುನ್ನಡೆ
ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮುನ್ನಡೆ ಕಾಯ್ದುಕೊಂಡಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಕಾಂಗ್ರೆಸ್ ನ ಮೃಣಾಲ್ ಹೆಬ್ಬಾಳ್ಕರ್ ಹಿನ್ನಡೆಯಲ್ಲಿದ್ದಾರೆ.

ಬೆಂಗಳೂರು ಉತ್ತರದಲ್ಲಿ ಶೋಭಾ ಮುನ್ನಡೆ
ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ನ ರಾಜೀವ್ ಗೌಡ ಎದುರು ಬಿಜೆಪಿ ಶೋಭಾ ಕರಂದ್ಲಾಜೆ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬೆಂಗಳೂರು ಸೆಂಟ್ರಲ್ ನಲ್ಲಿ ಪಿಸಿ ಮೋಹನ್
ಬೆಂಗಳೂರು ಸೆಂಟ್ರಲ್ ನಲ್ಲಿ ಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

 
  • ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಆರಂಭಿಕ ಹಂತದಿಂದಲೂ ಡಾ ಸಿಎನ್ ಮಂಜುನಾಥ್ ಮುನ್ನಡೆಯಲ್ಲಿದ್ದರು. ಆದರೆ ಇದೀಗ ಅವರ ಎದುರಾಳಿ ಕಾಂಗ್ರೆಸ್ ನ ಡಿಕೆ ಸುರೇಶ್ ಮುನ್ನಡೆ ಸಾಧಿಸಿದ್ದಾರೆ.
  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರೀಕ್ಷೆಯಂತೇ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮುನ್ನಡೆ ಕಾಯ್ದುಕೊಂಡಿದ್ದಾರೆ.
  • ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಮುನ್ನಡೆಯಲ್ಲಿದ್ದಾರೆ.
  • ಶಿವಮೊಗ್ಗದಲ್ಲಿ ಕೇವಲ 76 ಮತಗಳಿಂದ ಬಿವೈ ರಾಘವೇಂದ್ರ ಮುನ್ನಡೆಯಲ್ಲಿದ್ದಾರೆ.
  • ಕೊಯಮತ್ತೂರಿನಲ್ಲಿ ಅಣ್ಣಾಮಲೈ ಮುನ್ನಡೆ
  • ಅಯೋಧ್ಯೆಯಲ್ಲಿ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಗೆ ಹಿನ್ನಡೆ
  • ಉಡುಪಿಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಮುನ್ನಡೆ
  • ತಿರುವನಂತಪುರಂನಲ್ಲಿ ಶಶಿ ತರೂರ್ ಗೆ ಹಿನ್ನಡೆ
  • ಕೋಲಾರದಲ್ಲಿ ಮಲ್ಲೇಶ್ ಬಾಬು ಮುನ್ನಡೆ
  • ರಾಜಸ್ಥಾನ್ ನಲ್ಲಿ ಎನ್ ಡಿಎಗೆ 6 ಕ್ಷೇತ್ರ, ಇಂಡಿಯಾ ಒಕ್ಕೂಟ 3 ಕ್ಷೇತ್ರದಲ್ಲಿ ಮುನ್ನಡೆ
  • ತೂತುಕುಡಿ ಕ್ಷೇತ್ರದಲ್ಲಿ ಕನ್ನಿಮೊಳಿಗೆ ಮುನ್ನಡೆ
  • ಬೆಳಗಾವಿಯಲ್ಲಿ ಬಿಜೆಪಿಯ ಜಗದೀಶ್ ಶೆಟ್ಟರ್ ಗೆ ಹಿನ್ನಡೆ
ಮೂರನೇ ಹಂತದಲ್ಲಿ ಡಿಕೆ ಸುರೇಶ್ ಗೆ ಹಿನ್ನಡೆ
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಆರಂಭಿಕ ಹಂತದಲ್ಲಿ ಅಂಚೆ ಮತಗಳ ಮೂಲಕ ಮುನ್ನಡೆ ಸಾಧಿಸಿದ್ದ ಡಾ ಸಿಎನ್ ಮಂಜುನಾಥ್ ಬಳಿಕ ಹಿನ್ನಡೆ ಸಾಧಿಸಿದ್ದರು. ಇದೀಗ ಮೂರನೇ ಸುತ್ತಿನ ಮತ ಎಣಿಕೆ ಬಳಿಕ ಡಿಕೆ ಸುರೇಶ್ ಮತ್ತೆ ಹಿನ್ನಡೆ ಅನುಭವಿಸಿದ್ದು, ಮಂಜುನಾಥ್ ಮುನ್ನಡೆಯಲ್ಲಿದ್ದಾರೆ.

 
ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಆರಂಭಿಕ ಹಿನ್ನಡೆ
ಲೈಂಗಿಕ ಕಿರುಕುಳ ಆರೋಪದಲ್ಲಿ ಜೈಲು ಸೇರಿರುವ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ ಮುನ್ನಡೆಯಲ್ಲಿದ್ದಾರೆ.

ಮಂಡ್ಯದಲ್ಲಿ ಕುಮಾರಸ್ವಾಮಿ ಲೀಡಿಂಗ್
ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ 16 ಸಾವಿರ ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.
ಮಧ್ಯಪ್ರದೇಶದಲ್ಲಿ ಬಿಜೆಪಿ 10/ಕಾಂಗ್ರೆಸ್ 1
ಮಧ್ಯ ಪ್ರದೇಶದಲ್ಲಿ ಬಹುತೇಕ ಕೇಸರಿಮಯವಾಗಲಿದೆ. ಬಿಜೆಪಿ 10 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.
ಕ್ರಿಕೆಟಿಗ ಯೂಸುಫ್ ಪಠಾಣ್ ಗೆ ಹಿನ್ನಡೆ
ಪಶ್ಚಿಮ ಬಂಗಾಲದಲ್ಲಿ ಟಿಎಂಸಿಯಿಂದ ಸ್ಪರ್ಧಿಸಿದ್ದ ಕ್ರಿಕೆಟಿಗ ಯೂಸುಫ್ ಪಠಾಣ್ ಹಿನ್ನಡೆಯಲ್ಲಿದ್ದಾರೆ.

ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿಗೆ ಹಿನ್ನಡೆ
ಹಾವೇರಿಯಲ್ಲಿ ಆರಂಭಿಕ ಹಂತದಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಹಿನ್ನಡೆ ಉಂಟಾಗಿದೆ.

ಮೈಸೂರಿನಲ್ಲಿ ಯದುವೀರ್ ಗೆ ಮುನ್ನಡೆ
ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಒಡೆಯರ್ ಗೆ ಮುನ್ನಡೆ ಕಂಡುಬಂದಿದೆ.
270 ಮುನ್ನಡೆ ದಾಟಿದ ಎನ್ ಡಿ
ದೇಶಧಾದ್ಯಂತ ಒಟ್ಟಾರೆ 270 ಕ್ಕ್ಷೇತ್ರಗಳಲ್ಲಿ ಎನ್ ಡಿಎ ಮುನ್ನಡೆಯಲ್ಲಿದ್ದರೆ, ಇಂಡಿಯಾ ಒಕ್ಕೂಟ 189 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಇತರರು 52 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ ಮುನ್ನಡೆ
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ತೇಜಸ್ವಿ ಸೂರ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಶಿವಮೊಗ್ಗದಲ್ಲಿ ಗೀತಾ ಶಿವರಾಜ್ ಕುಮಾರ್ ಗೆ ಭಾರೀ ಹಿನ್ನಡೆ
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಬಿವೈ ರಾಘವೇಂದ್ರ ಭಾರೀ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ತೀರಾ ಹಿನ್ನಡೆಯಲ್ಲಿದ್ದಾರೆ. ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಮೂರನೇಸ್ಥಾನದಲ್ಲಿದ್ದಾರೆ.

ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಮುನ್ನಡೆ
ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮುನ್ನಡೆ ಕಾಯ್ದುಕೊಂಡಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಕಾಂಗ್ರೆಸ್ ನ ಮೃಣಾಲ್ ಹೆಬ್ಬಾಳ್ಕರ್ ಹಿನ್ನಡೆಯಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಷೇರು ಮಾರುಕಟ್ಟೆಯ ಮೇಲೂ ಎಲ್ಲರ ಕಣ್ಣು