Webdunia - Bharat's app for daily news and videos

Install App

ಪ್ರೇಮಿ ಯುವತಿಗೆ ಪ್ರಜ್ಞೆ ತಪ್ಪಿಸಿ ಗೆಳೆಯನೊಂದಿಗೆ ಅತ್ಯಾಚಾರವೆಸಗಿದ ಪ್ರಿಯಕರ

Webdunia
ಗುರುವಾರ, 11 ಫೆಬ್ರವರಿ 2016 (14:56 IST)
35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ಮತ್ತು ಆತನ ಗೆಳೆಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
 
ಮಹಿಳೆಯ ದೂರಿನ ಪ್ರಕಾರ, ಆಕೆಯ ಪ್ರಿಯತಮ ಅನುಜ್ ಚೌಧರಿ ಲಾಲ್‌ಕುವಾನ್ ಪ್ರದೇಶದಲ್ಲಿ ಭೇಟಿಯಾಗುವಂತೆ ಆಹ್ವಾನ ನೀಡಿದ್ದನು. ಭೇಟಿಗಾಗಿ ತೆರಳಿದ್ದಾಗ ತಂಪು ಪಾನೀಯದಲ್ಲಿ ಪ್ರಜ್ಞೆ ತಪ್ಪುವ ಔಷಧಿ ಬೆರಸಿ, ಪ್ರಜ್ಞೆ ತಪ್ಪಿದಾಗ ಇಬ್ಬರು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ಧಿರೇಂದ್ರ ಯಾದವ್ ತಿಳಿಸಿದ್ದಾರೆ.
 
ಅತ್ಯಾಚಾರವೆಸಗಿದ ನಂತರ ಮಹಿಳೆಯನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋದ ಆರೋಪಿಗಳು ಆಕೆಯನ್ನು ಚಿಪಾಯನಾ ರೈಲ್ಿವೆ ಕ್ರಾಸಿಂಗ್ ಬಳಿ ಬಿಟ್ಟು ಪರಾರಿಯಾಗಿದ್ದಾರೆ. ಘಟನೆಯಿಂದ ಆಘಾತಗೊಂಡ ಮಹಿಳೆ ಕೋತ್ವಾಲಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. 
 
ಹಾಪುರ್ ನಗರದ ನಿವಾಸಿಯಾದ ಮಹಿಳೆ ವಿಚ್ಚೇದಿತಳಾಗಿದ್ದು, ವಿಜಯ ನಗರ್ ಪ್ರದೇಶದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಹಾಜರಾಗಲು ನಗರಕ್ಕೆ ಬಂದಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಪರಾರಿಯಾಗಿರುವ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments