ಸೂರತ್: ಪ್ರೀತಿ ನಿರಾಕರಿಸಿದ ಹುಡುಗಿಯ ಮೇಲೆ ಕೋಪಗೊಂಡ ಯುವಕನೊಬ್ಬ ಆಕೆಯನ್ನು ಹಾಡು ಹಗಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.
									
			
			 
 			
 
 			
			                     
							
							
			        							
								
																	21 ವರ್ಷದ ಯುವತಿಗೆ ಯುವಕ ಪ್ರೇಮ ನಿವೇದನೆ ಮಾಡಿದ್ದ. ಆದರೆ ಆಕೆ ಒಪ್ಪಿರಲಿಲ್ಲ. ಇಷ್ಟಕ್ಕೇ ಕೋಪಗೊಂಡು ಆಕೆಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಈ ವಿಡಿಯೋಗಳು ವೈರಲ್ ಆಗಿದ್ದವು.
									
										
								
																	ಘಟನೆ ಬಳಿಕ ಯುವಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೊಲೆ ಮಾಡುವಾಗ ಸ್ಥಳೀಯರು ಆತನನ್ನು ತಡೆಯಲು ಯತ್ನಿಸಿದರೂ ಪ್ರಯೋಜನವಾಗಿರಲಿಲ್ಲ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.