ನವದೆಹಲಿ: ಲವ್ವರ್ ಜೊತೆ ಸೇರಿಕೊಂಡು ಗಂಡನನ್ನೇ ಕೊಲೆ ಮಾಡಿದ ತಪ್ಪಿಗೆ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.
ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಪೊಲೀಸರಿಗೆ ಮನೆಯಲ್ಲಿ ಮೃತದೇಹವಿರುವ ಬಗ್ಗೆ ಮಾಹಿತಿ ನೀಡಿದ್ದ. ಸ್ಥಳಕ್ಕೆ ಧಾವಿಸಿದಾಗ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಪತ್ನಿಯನ್ನು ಸುದೀರ್ಘ ವಿಚಾರಣೆ ನಡೆಸಿದಾಗ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾಳೆ. ಬಳಿಕ ಫೋನ್ ಟ್ರೇಸ್ ಮಾಡಿ ಆಕೆಯ ಪ್ರಿಯಕರನನ್ನೂ ಬಂಧಿಸಲಾಗಿದೆ.