Publish Date: Mon, 30 Jul 2018 (09:20 IST)
Updated Date: Mon, 30 Jul 2018 (09:22 IST)
ಚೆನ್ನೈ: ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಆರೋಗ್ಯ ಸ್ಥಿತಿ ತೀವ್ರ ಬಿಗಡಾಯಿಸಿದ ಸುದ್ದಿ ತಿಳಿದು ಅವರ ಅಭಿಮಾನಿಗಳಿಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸ್ಥಳಿಯ ಮಾಧ್ಯಮಗಳು ವರದಿ ಮಾಡಿವೆ.
ತಿರುವರೂರ್ ಎಂಬಲ್ಲಿ ಡಿಎಂಕೆ ಕಾರ್ಯಕರ್ತರೊಬ್ಬರು ಕರುಣಾನಿಧಿ ಆರೋಗ್ಯ ಸ್ಥಿತಿ ಬಗ್ಗೆ ಸುದ್ದಿ ತಿಳಿದು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ಮತ್ತೊಬ್ಬ ಕಾರ್ಯಕರ್ತ ರಾಜು ಎಂಬಾತ ತಮ್ಮ ನೆಚ್ಚಿನ ನಾಯಕನ ಸ್ಥಿತಿ ನೋಡಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಅಭಿಮಾನಿಗಳ ಈ ಅತಿರೇಕದ ವರ್ತನೆ ನೋಡಿ ನಿನ್ನೆ ಕರುಣಾನಿಧಿ ಪುತ್ರ ಸ್ಟಾಲಿನ್ ಮತ್ತು ಪುತ್ರಿ ಕನಿಮೊಳಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರಲ್ಲದೆ, ಇಂತಹ ಪರಿಸ್ಥಿತಿಯಲ್ಲಿ ಧೈರ್ಯದಿಂದಿರಬೇಕು ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.