Select Your Language

Notifications

webdunia
webdunia
webdunia
webdunia

Viral video: ನಡು ರಸ್ತೆಯಲ್ಲೇ ಮಹಿಳೆ ಜೊತೆ ಬಿಜೆಪಿ ನಾಯಕನ ಕಾಮದಾಟ, ಥೂ ಎಂದ ಜನ

Manohar Lal Dhakad

Krishnaveni K

ಭೋಪಾಲ್ , ಶನಿವಾರ, 24 ಮೇ 2025 (08:59 IST)
Photo Credit: X
ಭೋಪಾಲ್: ಮಧ್ಯಪ್ರದೇಶದ ಮಂಡೌರ್ ಜಿಲ್ಲೆಯ ಬಿಜೆಪಿ ನಾಯಕ ಮನೋಹರ್ ಲಾಲ್ ಧಾಕಡ್ ಮಹಿಳೆಯೊಂದಿಗೆ ನಡು ರಸ್ತೆಯಲ್ಲಿ ಕಾಮದಾಟವಾಡಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಜನ ಮನೋಹರ್ ಲಾಲ್ ಛೀ.. ಥೂ ಎಂದು ಉಗಿದಿದ್ದಾರೆ.

ಮೇ 13 ರಂದು ಘಟನೆ ನಡೆದಿದೆ ಎನ್ನಲಾಗಿದ್ದು, ಸಿಸಿಟಿವಿ ದೃಶ್ಯಗಳು ಈಗ ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮನೋಹರ್ ಲಾಲ್ ಓರ್ವ ಯುವತಿಯೊಂದಿಗೆ ತಾವೇ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದರು. ಇದ್ದಕ್ಕಿದ್ದಂತೆ ರಸ್ತೆ ಬದಿಗೆ ಕಾರು ನಿಲ್ಲಿಸಿ ಅರೆನಗ್ನ ಯುವತಿಯೊಂದಿಗೆ ಕಾರಿನಿಂದ ಇಳಿಯುತ್ತಾರೆ.

ಬಳಿಕ ಯುವತಿಯೊಂದಿಗೆ ಕೆಲವು ಹೊತ್ತು ಆಕ್ಷೇಪಾರ್ಹ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಈ  ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇನಲ್ಲಿ ಈ ಘಟನೆ ನಡೆದಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೇ ಬಿಜೆಪಿ ಪಕ್ಷದಿಂದ ಅವರನ್ನು ಅಮಾನತು ಮಾಡಲಾಗಿದೆ ಎನ್ನಲಾಗಿದೆ. ಈ ಘಟನೆಯಿಂದ ಪಕ್ಷ ದೂರವೇ ಉಳಿದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಇಂದಿನಿಂದ ಹವಾಮಾನದಲ್ಲಿ ಭಾರೀ ಬದಲಾವಣೆ